ಹುಬ್ಬಳ್ಳಿ: ಕೊರೊನಾ ಸೋಂಕಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿ ಜಿಲ್ಲೆಯ ಕೇಶ್ವಾಪುರದಲ್ಲಿ ನಡೆದಿದೆ. ಕಳೆದ 3 ದಿನಗಳ ಹಿಂದೆ ಮಂಜುನಾಥ್‌ಗೆ ಕೊವಿಡ್ ದೃಢಪಟ್ಟಿತ್ತು. ಮನೆಯಲ್ಲೇ ಹೋಂ ಐಸೋಲೇಷನ್‌ನಲ್ಲಿದ್ದ ಮಂಜುನಾಥ್ ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆಕಾಶ್ ಪಾಕ್೯ ನಿವಾಸಿ ಮಂಜುನಾಥ್ ಕೊರೊನಾ ಸೋಂಕಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಅಥವಾ ಇಂದು ಕೆಮ್ಮು ಹೆಚ್ಚಾಗಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಆಕ್ಸಿಜನ್ ಸಿಕ್ಕಿಲ್ಲ ಎಂದು ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ
25 ವರ್ಷದ ಯುವಕನೊಬ್ಬ ತನ್ನ ಸಂಬಂಧಿಕರೊಬ್ಬರಿಗೆ ಆಕ್ಸಿಜನ್ ಸಿಲಿಂಡರ್ ಸಿಗಲಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹರಿಯಾಣದಲ್ಲಿ ನಡೆದಿದೆ. ತಮ್ಮ ಸಂಬಂಧಿಕರೊಬ್ಬರಿಗೆ ಆಕ್ಸಿಜನ್ ಸಿಲಿಂಡರ್ ಸಿಗಲಿಲ್ಲ ಎಂದು ಶನಿವಾರ ಗುರುಗ್ರಾಮ್ನ ಮಾನೇಸರ್‌ನ ಆಮ್ಲಜನಕ ಅನಿಲ ಘಟಕದ ಎದುರಿನ ಸಾರ್ವಜನಿಕ ಉದ್ಯಾನವನದಲ್ಲಿನ ಮರವೊಂದಕ್ಕೆ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೂಲಗಳ ಪ್ರಕಾರ, ಉತ್ತರ ಪ್ರದೇಶದ ಕನ್ನೌಜ್ ನಿವಾಸಿ ಧರ್ಮೇಂದರ್ ಎಂಬ ಯುವಕನ ಸಂಬಂಧಿಕರೊಬ್ಬರು ಗುರುಗ್ರಾಮ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅವರಿಗೆ ಆಮ್ಲಜನಕದ ಅನಿವಾರ್ಯತೆ ಇತ್ತು. ಹೀಗಾಗಿ ಧರ್ಮೇಂದರ್ ಆಕ್ಸಿಜನ್ ಸಿಲಿಂಡರ್ಗಾಗಿ ಆಮ್ಲಜನಕ ಅನಿಲ ಘಟಕದಲ್ಲಿ ಶನಿವಾರ ಬೆಳಿಗ್ಗೆಯಿಂದಲೂ ಸರತಿ ಸಾಲಿನಲ್ಲಿ ನಿಂತಿದ್ದ. ಆದ್ರೆ ಆತನಿಗೆ ಸಿಲಿಂಡರ್ ಸಿಕ್ಕಿರಲಿಲ್ಲ. ಹೀಗಾಗಿ ಮನನೊಂದು ಅಲ್ಲೇ ಪಕ್ಕದಲ್ಲಿದ್ದ ಪಾರ್ಕ್ನ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.
ಪೊಲೀಸರ ಪ್ರಕಾರ, ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಜೇಬಿನಲ್ಲಿ ಪತ್ರ ಸಿಕ್ಕಿದ್ದು, ಅದರಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ತನ್ನ ಸಾವಿಗೆ ಮಹಿಳೆಯೇ ಕಾರಣ ಎಂದು ಬರೆದಿದ್ದಾನೆ. ಮಹಿಳೆಯ ಹೆಸರನ್ನು ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದ್ರೆ ಈ ಪತ್ರದಲ್ಲಿ ಆಮ್ಲಜನಕ ಸಿಲಿಂಡರ್ ಬಗ್ಗೆ ಏನನ್ನೂ ಉಲ್ಲೇಖಿಸಿಲ್ಲ. ಹಾಗೂ ಗುರುಗ್ರಾಮ್ನಲ್ಲಿ ಮೃತ ವ್ಯಕ್ತಿಯ ಯಾವುದೇ ಕುಟುಂಬ ಸದಸ್ಯರು ಅಥವಾ ಸಂಬಂಧಿಕರು ಆಸ್ಪತ್ರೆಗೆ ದಾಖಲಾಗಿಲ್ಲ ಎಂದು ಡಿಸಿಪಿ ವರುಣ್ ಸಿಂಗ್ಲಾ ಐಎಎನ್‌ಎಸ್‌ಗೆ ತಿಳಿಸಿದ್ದಾರೆ. ಆತ್ಮಹತ್ಯೆ ಹಿಂದಿನ ನಿಖರ ಕಾರಣ ತಿಳಿದು ಬಂದಿಲ್ಲ.