Breaking News

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ದುರಂತ ಸುರೇಶ್ ಕುಮಾರ್ ವಿರುದ್ಧ ಸಿಎಂ ಗರಂ

Spread the love

ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ದುರಂತ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತುರ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ.

ಜಿಲ್ಲಾಸ್ಪತ್ರೆಯಲ್ಲಿ ಕಳೆದ 24 ಗಂಟೆಯಲ್ಲಿ 24 ರೋಗಿಗಳು ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿರುವ ಘಟನೆ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ನಾಳೆ ಸಂಜೆ 4 ಗಂಟೆಗೆ ತುರ್ತು ಸಚಿವ ಸಂಪುಟ ಸಭೆ ಕರೆದಿದ್ದು, ಜಿಲ್ಲಾಸ್ಪತ್ರೆಗಳ ಸ್ಥಿತಿಗತಿ, ಆಕ್ಸಿಜನ್ ವ್ಯವಸ್ಥೆ, ಬೆಡ್, ಚಿಕಿತ್ಸೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ತಮ್ಮದೇ ಉಸ್ತುವಾರಿ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯಿಂದ ರೋಗಿಗಳು ಪರದಾಡುತ್ತಿದ್ದರೂ ವ್ಯಸ್ಥೆಗಳನ್ನು ಮಾಡದ ಸಚಿವ ಸುರೇಶ್ ಕುಮಾರ್ ವಿರುದ್ಧ ಸಿಎಂ ಗರಂ ಆಗಿದ್ದಾರೆ ಎಂದು ತಿಳಿದಿಬಂದಿದೆ.


Spread the love

About Laxminews 24x7

Check Also

ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಕೊಟ್ಟಿರೋ ಸಿಎ ಸೈಟ್ ವಾಪಸ್ ಪಡೆಯಬೇಕು: ಬಿಜೆಪಿ ಆಗ್ರಹ

Spread the love ಬೆಂಗಳೂರು: ಕಾಂಗ್ರೆಸ್ ಭವನಕ್ಕೆ ಕಡಿಮೆ ದರದಲ್ಲಿ ಸಿಎ ನಿವೇಶನಗಳನ್ನು (CA Site) ಕೊಟ್ಟಿರೋ ವಿಚಾರ ವಿಧಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ