Breaking News

ಮುಖ್ಯಮಂತ್ರಿ B.S.Y.ರಾಜೀನಾಮೆ ನೀಡಲಿ- ಸಿದ್ದರಾಮಯ್ಯ

Spread the love

ಬೆಂಗಳೂರು: ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಸಿಗದೆ 24 ಜನ ರೋಗಿಗಳು ಸಾವಿಗೀಡಾಗಿರುವ ಘಟನೆ ತಿಳಿದು ಸಂಕಟವಾಯಿತು. ಮೃತರ ಶೋಕತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಅಲ್ಲದೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಆಕ್ಸಿಜನ್ ಸಿಗದೆ ಉಂಟಾಗಿರುವ ಸರಣಿ ಸಾವುಗಳ ಮುಂದುವರೆದ ಭಾಗವಿದು. ಈ ಸಾವಿಗೆ ರಾಜ್ಯದ ಬಿಜೆಪಿ ಸರ್ಕಾರ, ಜಿಲ್ಲಾಸ್ಪತ್ರೆಯ ವೈದ್ಯರು ಹಾಗೂ ಜಿಲ್ಲಾಡಳಿತವೇ ನೇರ ಹೊಣೆ ಎಂದಿದ್ದಾರೆ.

ಇದು ಅತ್ಯಂತ ಗಂಭೀರ ಹಾಗೂ ಅಮಾನವೀಯ ಪ್ರಕರಣ. ರಾಜ್ಯದಲ್ಲಿ ಆಡಳಿತಯಂತ್ರ ಕುಸಿದುಬಿದ್ದಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ? ಬಿಜೆಪಿಯವರ ಅಧಿಕಾರದ ಲಾಲಸೆಗೆ ಇನ್ನಷ್ಟು ಅಮಾಯಕ ಜನರು ಬಲಿಯಾಗುವುದು ಬೇಡ. ಜನರ ಜೀವ ರಕ್ಷಿಸಲಾಗದ ಇಂಥಾ ಸರ್ಕಾರ ಇರುವುದಕ್ಕಿಂತ ತೊಲಗುವುದೇ ಲೇಸು ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ಪ್ರಕರಣದ ನೈತಿಕ ಹೊಣೆಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಈ ಪ್ರಕರಣದ ಬಗ್ಗೆ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದ ಸಮಿತಿಯ ಮೂಲಕ ತನಿಖೆ ನಡೆಸಬೇಕು ಎಂದು ಮುಖ್ಯಮಂತ್ರಿ ಅವರನ್ನು ಒತ್ತಾಯಿಸುತ್ತೇನೆ ಎಂದು ತಿಳಿಸಿದ್ದಾರೆ.

 


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ