Breaking News
Home / ಜಿಲ್ಲೆ / ಬೆಳಗಾವಿ / ಮೇ.12 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಮುಂದುವರೆಸಿ, ಜಿಲ್ಲಾಧಿಕಾರಿ ಡಾ.ಕೆ. ಹರೀಶ್ ಕುಮಾರ್ ಆದೇಶ

ಮೇ.12 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಮುಂದುವರೆಸಿ, ಜಿಲ್ಲಾಧಿಕಾರಿ ಡಾ.ಕೆ. ಹರೀಶ್ ಕುಮಾರ್ ಆದೇಶ

Spread the love

ಬೆಳಗಾವಿ: ಕೋವಿಡ್-19 ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ತಡೆಗಟ್ಟಲು ಮುಂಜಾಗೃತಾ ಕ್ರಮವಾಗಿ ಮೇ.12 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಮುಂದುವರೆಸಿ, ಜಿಲ್ಲಾಧಿಕಾರಿ ಡಾ.ಕೆ. ಹರೀಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಕೋರೊನಾ ವೈರಸ್‌ ಸೋಂಕು ಹರಡದಂತೆ ಸಾರ್ವಜನಿಕರ ಆರೋಗ್ಯ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಏಪ್ರಿಲ್ 21ರ ರಾತ್ರಿ 9 ಗಂಟೆಯಿಂದ ಮೇ.4 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಹೊರಡಿಸಲಾಗಿತ್ತು.

ಆದರೆ, ಕೊವಿಡ್ ಪ್ರಕರಣಗಳಲ್ಲಿ ಪ್ರತಿದಿನ ಹೆಚ್ಚಳ ಕಂಡುಬರುತ್ತಿರುವುದರಿಂದ ಮೇ.4 ಬೆಳಿಗ್ಗೆ 6 ಗಂಟೆಯವರೆಗೆ ಇರುವ ನೀಷೆಧಾಜ್ಞೆಯನ್ನು ಮೇ.12 ಬೆಳಿಗ್ಗೆ 6 ಗಂಟೆಯವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರು ತಿಳಿಸಿದ್ದಾರೆ.

ಅವಶ್ಯಕ ಚಟುವಟಿಕೆಗಳು ಹಾಗೂ ತಾಲೂಕಾ ಮಟ್ಟದ ವಿಪತ್ತು ನಿರ್ವಹಣಾ ಸಮಿತಿಯಿಂದ ಪೂರ್ವಾನುಮತಿ ಪಡೆದುಕೊಂಡ ಚಟುವಟಿಕೆಗಳಿಗೆ ಮಾತ್ರ ಅವಕಾಶವಿರುತ್ತದೆ. ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ 188 ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ದಂಡಾಧಿಕಾರಿಗಳಾದ ಡಾ.ಕೆ.ಹರೀಶ್ ಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.


Spread the love

About Laxminews 24x7

Check Also

ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಕ್ಕೆ ಚಾನ್ಸೇ ಇಲ್ಲ

Spread the love ಹಾವೇರಿ : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಎಲ್ಲಾ ಪಕ್ಷದ ನಾಯಕರುಗಳು ಅಭ್ಯರ್ಥಿಗಳು ಪರಸ್ಪರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ