Breaking News

ಪಂಚರಾಜ್ಯ ಚುನಾವಣೆ ಮುಗಿಯುತ್ತಿದ್ದಂತೆ ವಾಹನ ಚಾಲಕರಿಗೆ ಶಾಕ್ ಕೊಟ್ಟ ಕೇಂದ್ರ

Spread the love

ನವದೆಹಲಿ: ಪಂಚರಾಜ್ಯ ಚುನಾವಣೆಗೂ ಮುಂಚೆ ದಿನನಿತ್ಯ ಪೆಟ್ರೋಲ್ ಡಿಸೇಲ್ ಬೆಲೆ ಏರುತ್ತಲೇ ಇತ್ತು. ಚುನಾವಣೆ ಹೊತ್ತಲ್ಲಿ ಸ್ಥಿರವಾಗಿದ್ದ ದರ ಇದೀಗ ಚುನಾವಣೆ ಮುಗಿಯುತ್ತಿದ್ದಂತೆ ಮತ್ತೆ ಕೇಂದ್ರ ಸರ್ಕಾರ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿ ವಾಹನ ಸವಾರರಿಗೆ ಬಿಗ್ ಶಾಕ್ ಕೊಟ್ಟಿದೆ.

ಇಂದು ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 15 ಪೈಸೆ ಏರಿಕೆಯಾಗಿದ್ದು, ಡಿಸೇಲ್ ದರ 16 ಪೈಸೆ ಏರಿಕೆ ಮಾಡಲಾಗಿದೆ. ಈ ಮೂಲಕ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 90.40 ರೂ. ಆಗಿದ್ದು, ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 80.73 ರೂ. ದರ ಇದೆ.

ಅಂತರರಾಷ್ಟ್ರೀಯ ತೈಲ ಬೆಲೆ ಮತ್ತು ವಿದೇಶಿ ವಿನಿಮಯ ದರಗಳಿಗೆ ಅನುಗುಣವಾಗಿ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪ್ರತಿದಿನ ಪರಿಷ್ಕರಿಸಲಾಗುತ್ತದೆ. ಕಚ್ಚಾ ತೈಲವು ಈಗ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರೆಲ್ ಗೆ 66 ಡಾಲರ್ ಇದೆ.

ಕೇಂದ್ರ ಸರ್ಕಾರವು ಪೆಟ್ರೋಲ್ ಬೆಲೆಯ ಪ್ರತಿ ಲೀಟರ್ ಗೆ 31.98 ರೂ.ಗಳನ್ನು ಮತ್ತು ರಾಜ್ಯ ಸರ್ಕಾರದ ಮಾರಾಟ ತೆರಿಗೆ 19.55.ರೂ. ಹಾಗೂ ಡೀಸೆಲ್ ಗೆ, ಕೇಂದ್ರ ಅಬಕಾರಿ ಸುಂಕ 31.83 ರೂ. ಮತ್ತು 10.99 ರೂ. ವ್ಯಾಟ್ ಅನ್ನು ಸೇರಿಸುತ್ತದೆ. ಇದಲ್ಲದೆ, ತೈಲ ಏಜೆನ್ಸಿಗಳು ಪೆಟ್ರೋಲ್ ಬೆಲೆ ಮೇಲೆ ಪ್ರತಿ ಲೀಟರ್ ಗೆ ಕನಿಷ್ಠ 2.6 ರೂ. ಮತ್ತು ಡೀಸೆಲ್ ಮೇಲೆ 2 ರೂ.ಗಳ ಡೀಲರ್ ಕಮಿಷನ್ ಪಡೆಯುತ್ತವೆ. ಇದರಿಂದ ಒಂದು ವರ್ಷದ ಅವಧಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 21.58 ರೂ., ಡೀಸೆಲ್ ಲೀಟರ್ ಗೆ 19.18 ರೂ. ಹೆಚ್ಚಳವಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ