Breaking News

ಬೆಂಗಳೂರು-ಧಾರವಾಡ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ

Spread the love

ಧಾರವಾಡ, ಮೇ 04; ಕರ್ನಾಟಕದಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಸರ್ಕಾರಿ ಮತ್ತು ಖಾಸಗಿ ಬಸ್‌ಗಳ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ರೈಲಿನ ಮೂಲಕ ಸಂಚಾರ ನಡೆಸುವ ಜನರು ಟಿಕೆಟ್ ತೋರಿಸಿ ರೈಲು ನಿಲ್ದಾಣಕ್ಕೆ ಸಂಚಾರ ನಡೆಸಲು ಅವಕಾಶ ನೀಡಲಾಗಿದೆ.

ನೈಋತ್ಯ ರೈಲ್ವೆ ಪ್ರಯಾಣಿಕರ ಕೊರತೆಯ ಕಾರಣ ಮೇ 4ರಿಂದ ಮುಂದಿನ ಆದೇಶದ ತನಕ ಧಾರವಾಡ- ಬೆಂಗಳೂರು ನಡುವೆ ಸಂಚಾರ ನಡೆಸುತ್ತಿದ್ದ ರೈಲು ಸೇವೆಯನ್ನು ಸ್ಥಗಿತಗೊಳಿಸಿದೆ. ಇದರಿಂದಾಗಿ ರಾಜಧಾನಿಯಿಂದ ಉತ್ತರ ಕರ್ನಾಟಕ ಭಾಗಕ್ಕೆ ಸಂಚಾರ ನಡೆಸುವ ಜನರಿಗೆ ತೊಂದರೆಯಾಗಲಿದೆ.

 

ರೈಲು ಸಂಖ್ಯೆ 02725/02726 ಕೆ.ಎಸ್.ಆರ್. ಬೆಂಗಳೂರು-ಧಾರವಾಡ- ಕೆ.ಎಸ್.ಆರ್. ಬೆಂಗಳೂರು ಎಕ್ಸ್ ಪ್ರೆಸ್ ವಿಶೇಷ ರೈಲು ಸೇವೆಯನ್ನು ಬೆಂಗಳೂರಿನಿಂದ ಮೇ 4 ಮತ್ತು ಧಾರವಾಡದಿಂದ ಮೇ 5 ರಿಂದ ಮುಂದಿನ ಸೂಚನೆಯವರೆಗೆ ರದ್ದುಗೊಳಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 

ಒಂದು ಟ್ರಿಪ್ ಸಂಚಾರ ನೈಋತ್ಯ ರೈಲ್ವೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲು ಸಂಖ್ಯೆ 07313 ವಾಸ್ಕೋ ಡ ಗಾಮಾ-ದಾನಾಪುರ ಎಕ್ಸ್ ಪ್ರೆಸ್ ವಿಶೇಷ ರೈಲನ್ನು 6.5.2021ರಂದು ಒಂದು ಟ್ರಿಪ್ ಮಾತ್ರ ಓಡಿಸಲಿದೆ ಎಂದು ಸ್ಪಷ್ಟಪಡಿಸಲಾಗಿದೆ.

 

ಆಕ್ಸಿಜನ್ ಪೂರೈಕೆ ಕೋವಿಡ್ ವಿರುದ್ಧ ಹೋರಾಟಕ್ಕೆ ರಾಜ್ಯಗಳಿಗೆ ಸಹಕಾರ ನೀಡಲು ಕೇಂದ್ರ ಸರ್ಕಾರ ರೈಲಿನ ಮೂಲಕ ಆಕ್ಸಿಜನ್ ಸಾಗಾಣೆ ಮಾಡುತ್ತಿದೆ. ಕರ್ನಾಟಕದಲ್ಲಿ ಸಹ ಆಕ್ಸಿಜನ್ ಸ್ವೀಕರಿಸಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ.

 


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ