Breaking News

ಹುಬ್ಬಳ್ಳಿಯಲ್ಲಿ ಐವರು ಕೋವಿಡ್ ಸೋಂಕಿತರ ಸಾವು ! ದುರಂತಕ್ಕೆ ಆಕ್ಸಿಜನ್ ಕೊರತೆ ಆರೋಪ

Spread the love

ಹುಬ್ಬಳ್ಳಿ: ಇಲ್ಲಿನ ಗೋಕುಲ ರಸ್ತೆಯ ಲೈಫ್ ಲೈನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಐವರು ಕೋವಿಡ್ ಸೋಂಕಿತರು ಚಿಕಿತ್ಸೆ ಫಲಿಸದೆ ಮಂಗಳವಾರ ಸಂಜೆ ಮೃತಪಟ್ಟಿದ್ದಾರೆ. ಮೃತರ ಕುಟುಂದವರು ಆಕ್ಸಿಜನ್ ಕೊರತೆ ಕಾರಣ ಎಂದು ಆರೋಪಿಸಿದ್ದಾರೆ. ಆದರೆ, ಆಸ್ಪತ್ರೆ ಮೂಲಗಳು ಇದನ್ನು ನಿರಾಕರಿಸಿವೆ.

ಜಿಲ್ಲಾ ಆರೋಗ್ಯಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಘಟನೆ ಕುರಿತು ಪರಿಶೀಲಿಸಿದರು.

ಮೃತರ ಕುಟುಂಬದವರು ಆಕ್ಸಿಜನ್ ಕೊರತೆಯಿಂದಲೇ ಮೃತಪಟ್ಟಿದ್ದಾರೆಂದು ಆರೋಪಿಸಿದರು. ಆದರೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಯಶವಂತ ಮದೀನಕರ ಅವರು, ಕೋವಿಡ್ ಸೋಂಕಿನಿಂದ ಬಳಲುತ್ತಿದ್ದವರು ತೀವ್ರ ಉಸಿರಾಟ ತೊಂದರೆ ಹಾಗೂ ಇನ್ನಿತರೆ ಕಾಯಿಲೆಯಿಂದ ಮೃತಪಟ್ಟಿದ್ದಾರೆ ವಿನಃ ಆಕ್ಸಿಜನ್ ಕೊರತೆಯಿಂದಲ್ಲ ಎಂದಿದ್ದಾರೆ. ಆಸ್ಪತ್ರೆಯವರು ಸಹಿತ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.


Spread the love

About Laxminews 24x7

Check Also

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣ, ದಂಡ ಸಂಗ್ರಹದಲ್ಲಿ ಹೆಚ್ಚಳ

Spread the loveಹುಬ್ಬಳ್ಳಿ: ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ