Breaking News

ಕೊರೊನಾ ಸೋಂಕಿತ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರವು ಮೇ 10ರವರೆಗೆ ಲಾಕ್‌ಡೌನ್ ವಿಸ್ತರಿಸಿದೆ.

Spread the love

ಲಕ್ನೋ, ಮೇ 05: ಕೊರೊನಾ ಸೋಂಕಿತ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರವು ಮೇ 10ರವರೆಗೆ ಲಾಕ್‌ಡೌನ್ ವಿಸ್ತರಿಸಿದೆ.

ಕೊರೊನಾ ವೈರಸ್ ಪ್ರಕರಣಗಳು ಮತ್ತಷ್ಟು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಾರಾಂತ್ಯದ ಲಾಕ್‌ಡೌನ್ ಅವಧಿಯನ್ನು ಮೇ 10 ರಂದು ಬೆಳಗ್ಗೆ 7 ಗಂಟೆಯವರೆಗೆ ವಿಸ್ತರಿಸಲು ಉತ್ತರ ಪ್ರದೇಶ ಸರ್ಕಾರ ಬುಧವಾರ ನಿರ್ಧರಿಸಿದೆ ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.

ಕೊರೊನಾ ಕರ್ಫ್ಯೂ ವೇಳೆ ಎಲ್ಲಾ ಅಂಗಡಿಗಳು ಮತ್ತು ಸಂಸ್ಥೆಗಳು ಸೋಮವಾರ ಬೆಳಗ್ಗೆ 7 ರವರೆಗೆ ಮುಚ್ಚಲ್ಪಡುತ್ತವೆ. ಕರ್ಫ್ಯೂ ಮತ್ತೆ ವಿಸ್ತರಿಸುವ ಬಗ್ಗೆ ಮುಂದೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಕೊರೊನಾ ಕರ್ಫ್ಯೂ ಅನ್ನು ಮೇ 10ರ ಬೆಳಗ್ಗೆ 7 ರವರೆಗೆ ವಿಸ್ತರಿಸಲಾಗಿದೆ ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ. ಕೊರೊನಾ ಕರ್ಫ್ಯೂ ವೇಳೆ ಎಲ್ಲಾ ಅಗತ್ಯ ಸೇವೆಗಳಿಗೆ ಮತ್ತು ಲಸಿಕೆ ಅಭಿಯಾನಕ್ಕೆ ಅವಕಾಶ ನೀಡಲಾಗಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ. ಆದರೆ ಲಾಕ್ ಡೌನ್ ಪದ ಬಳಸಲು ಅವರು ನಿರಾಕರಿಸಿದರು.

ಕೊರೊನಾ ವೈರಸ್ ಚೈನ್ ಬ್ರೇಕ್ ಮಾಡಲು ರಾಜ್ಯ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಅವರು ಹೇಳಿದ್ದಾರೆ.

ಭಾರತದಲ್ಲಿ ಕೊರೊನಾ ವೈರಸ್ ಅಬ್ಬರ ಎಂದಿನಂತೆ ಮುಂದುವರೆದಿದ್ದು, ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 3,82 ಲಕ್ಷ ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಒಂದೇ ದಿನ 3,82,315 ಹೊಸ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,06,65,148ಕ್ಕೆ ಏರಿಕೆಯಾಗಿದೆ. ಇನ್ನು ಒಂದೇ ದಿನ ದೇಶದಲ್ಲಿ 3,780 ಮಂದಿ ಸಾವು ಸಂಭವಿಸಿದ್ದು, ಸಾವಿನ ಸಂಖ್ಯೆ 2,26,188ಕ್ಕೆ ತಲುಪಿದೆ.

ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 34,87,229ಕ್ಕೆ ಏರಿಕೆಯಾಗಿದೆ.


Spread the love

About Laxminews 24x7

Check Also

ಮಂಗಳೂರು ಏರ್ಪೋರ್ಟ್‌ನಲ್ಲಿ ಕೆ.ಸಿ.ವೇಣುಗೋಪಾಲ್ ಎದುರು ಡಿಕೆಶಿ​ ಪರ ಘೋಷಣೆ

Spread the loveಮಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಇಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಈ ಸಂದರ್ಭದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ