Breaking News

ಕೊರೊನಾ ಸೋಂಕಿತೆಗೆ ಬೆಡ್ ಕೊಡಿಸಿದ್ದಕ್ಕೆ 1.20 ಲಕ್ಷ ರೂ. ಸುಲಿಗೆ

Spread the love

ಬೆಂಗಳೂರು, ಮೇ 5: ಕೊರೊನಾ ಸೋಂಕಿತ ಮಹಿಳೆಗೆ ಖಾಸಗಿ ಆಸ್ಪತ್ರೆಯಲ್ಲಿ ಐಸಿಯು ಬೆಡ್ ಕೊಡಿಸಿ 1.20 ಲಕ್ಷ ರೂ. ಹಣ ಪೀಕಿದ್ದ ಮೂವರು ದಂಧೆಕೋರರನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಎಂ.ಎಸ್. ರಾಮಯ್ಯ ಆಸ್ಪತ್ರೆಯ ಅರೋಗ್ಯ ಮಿತ್ರ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಚೇತನ್ ಸೇರಿದಂತೆ ಮೂವರು ಬಂಧನಕ್ಕೆ ಒಳಗಾಗಿದ್ದಾರೆ.

ನೆಲಮಂಗಲದ ಲಕ್ಷ್ಮಿದೇವಮ್ಮ ಎಂಬುವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಕೂಡಲೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಯಶವಂತಪುರದ ಪೀಪಲ್ ಟ್ರೀ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಲಕ್ಷ್ಮೀದೇವಮ್ಮ ಆರೋಗ್ಯ ಸ್ಥಿತಿ ಕ್ಷೀಣಿಸಿತ್ತು. ಐಸಿಯು ಬೆಡ್ ಅಗತ್ಯತೆ ಬಿದ್ದಿದೆ. ಪೀಪಲ್ ಟ್ರೀ ನಲ್ಲಿ ಐಸಿಯು ವೆಂಟಿಲೇಟರ್ ಇಲ್ಲದ ಕಾರಣ ಎಂ.ಎಸ್. ರಾಮಯ್ಯ ಆಸ್ಪತ್ರೆಯ ಇಬ್ಬರ ಸಂಪರ್ಕವನ್ನು ನೀಡಿದ್ದಾರೆ. ವೆಂಕಟಸುಬ್ಬರಾವ್ ಮತ್ತು ಮಂಜುನಾಥ್ ಅವರನ್ನು ಸಂಪರ್ಕಿಸಿದಾಗ ಅವರು ಎಂ.ಎಸ್. ರಾಮಯ್ಯ ಆಸ್ಪತ್ರೆಯ ಆರೋಗ್ಯ ಮಿತ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪುನೀತ್ ವಿವರ ನೀಡಿದ್ದಾರೆ. ಪುನೀತ್‌ನನ್ನು ಸಂಪರ್ಕಿಸಿದಾಗ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಐಸಿಯು ಬೆಡ್ ಕೊಡಿಸಿದ್ದಾರೆ. ಇದಕ್ಕಾಗಿ 1.20 ಲಕ್ಷ ರೂ. ಹಣವನ್ನು ಸುಲಿಗೆ ಮಾಡಿದ್ದಾರೆ. ಗೂಗಲ್ ಪೇ ಮೂಲಕ 50 ಸಾವಿರ ಹಾಗೂ ನಗದು ರೂಪದಲ್ಲಿ 70 ಸಾವಿರ ರೂ. ಪಡೆದುಕೊಂಡಿದ್ದಾರೆ. ಚಿಕಿತ್ಸೆ ಪಡೆದ ಕೆಲವೇ ತಾಸಿನಲ್ಲಿ ಲಕ್ಷ್ಮೀದೇವಮ್ಮ ಸಾವನ್ನಪ್ಪಿದ್ದಾರೆ.

ಈ ಕುರಿತು ಚೇತನ್ ಎಂಬಾತ ಬೆಂಗಳೂರು ಪೊಲೀಸರ ಕಂಟ್ರೋಲ್ ರೂಮ್‌ಗೆ ಕರೆ ಮಾಡಿ ವಿವರ ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಸದಾಶಿವನಗರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಆರೋಪಿಗಳು ಈ ಹಿಂದೆ ಬೇರೆ ಯಾರಿಗಾದರೂ ಈ ರೀತಿ ಬೆಡ್ ಕೊಡಿಸಿ ವಂಚನೆ ಮಾಡಿರುವ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ ಎಂದು ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್. ಅನುಚೇತ್ ತಿಳಿಸಿದ್ದಾರೆ.


Spread the love

About Laxminews 24x7

Check Also

ರೇಣುಕಾಸ್ವಾಮಿ ಕೊಲೆ ಆರೋಪಿಗಳಿಗೆ ಮನೆ ಊಟಕ್ಕೆ ತಡೆ ನೀಡಿದ ಹೈಕೋರ್ಟ್​

Spread the loveಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ, ನಾಗರಾಜ್ ಮತ್ತು ಲಕ್ಷ್ಮಣ್​ಗೆ ವಾರಕ್ಕೊಮ್ಮೆ ಮನೆಯಿಂದ ಊಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ