Breaking News

ಖಾಸಗಿ ಆಸ್ಪತ್ರೆಗಳ ಕರ್ಮಕಾಂಡ ಬಿಚ್ಚಿಟ್ಟ ನಟಿ ಸುಧಾರಾಣಿ

Spread the love

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಸುಧಾರಾಣಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದ ಅಣ್ಣನ ಮಗಳಿಗೆ ಚಿಕಿತ್ಸೆ ಕೊಡಿಸಲು ತಡರಾತ್ರಿ ಪರದಾಡಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಅಣ್ಣನ ಮಗಳನ್ನು ಕರೆತಂದ ಸುಧಾರಾಣಿ ಅವರಿಗೆ ಆಸ್ಪತ್ರೆ ಸಿಬ್ಬಂದಿ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ.

ಸುಧಾರಾಣಿ ಅವರ ಅಣ್ಣನ ಮಗಳು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಪರಿಣಾಮ ತಡರಾತ್ರಿ ಯುವತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ನಗರ ಖಾಸಗಿ ಆಸ್ಪತ್ರೆಯ ಬಳಿ ತೆರಳಿದ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯರು ಪ್ರಾಥಮಿಕ ಚಿಕಿತ್ಸೆಯನ್ನು ನೀಡಲು ನಿರಾಕರಿಸಿದ್ದಾರೆ. ಅಲ್ಲದೇ ಆಸ್ಪತ್ರೆಯ ಒಳಗು ಪ್ರವೇಶ ನೀಡದೆ ತಡೆದಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಸುಧಾರಾಣಿ ಅವರು, ಕಿಡ್ನಿ ಸ್ಟೋನ್‍ನಿಂದ ಬಳಲುತ್ತಿದ್ದ ಯುವತಿಯನ್ನು ಸೌಜನ್ಯಕ್ಕೂ ಚೆಕ್ ಮಾಡದೇ ವೆಂಟಿಲೇಟರ್ ಮತ್ತು ಬೆಡ್‍ಗಳಿಲ್ಲ ಅಂತ ಗಂಟೆಗಳ ಕಾಲ ಆಸ್ಪತ್ರೆಯ ಮುಂಭಾಗದಲ್ಲಿ ನಿಲ್ಲಿಸಿದ್ದಾರೆ. ಪ್ರಥಮ ಚಿಕಿತ್ಸೆಯಾದರೂ ನೀಡಿ ಎಂದರೇ ವೆಂಟಿಲೇಟರ್ ಇಲ್ಲ, ಬೆಡ್ ಇಲ್ಲ ಎಂಬುದನ್ನೇ ಹೇಳುತ್ತಾರೆ. ವೈದ್ಯರ ಹೀಗೆ ಮಾಡಿದರೆ ಸಾಮಾನ್ಯ ಜನರ ಪರಿಸ್ಥಿತಿ ಯಾವ ಸ್ಥಿತಿ ಬರುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಖಾಸಗಿ ಆಸ್ಪತ್ರೆಯ ವೈದ್ಯರ ಮೊಂಡಾಟದಿಂದ ರೋಸಿ ಹೋದ ಸುಧಾರಾಣಿ ಅವರು ಕೊನೆಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್‍ಗೆ ಕರೆ ಮಾಡಿ ಸಹಾಯ ಪಡೆದಿದ್ದಾರೆ. ಕಮೀಷನರ್ ಅವರಿಗೆ ಮಾತನಾಡುತ್ತಿದ್ದಂತೆ ವೈದ್ಯರು ಚಿಕಿತ್ಸೆ ನೀಡಿದ್ದಾರೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ