Breaking News
Home / ಜಿಲ್ಲೆ / ಬೆಂಗಳೂರು / ಬೆಡ್ ಸಿಗದೇ ವಿಧಾನಸೌಧಕ್ಕೇ ಸೋಂಕಿತೆಯನ್ನು ಕರೆತಂದ ಕುಟುಂಬಸ್ಥರು

ಬೆಡ್ ಸಿಗದೇ ವಿಧಾನಸೌಧಕ್ಕೇ ಸೋಂಕಿತೆಯನ್ನು ಕರೆತಂದ ಕುಟುಂಬಸ್ಥರು

Spread the love

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸ್ಥಿತಿ ಕೇಳುವವರಿಲ್ಲದಂತಾಗಿದೆ. ಒಂದೆಡೆ ಆಸ್ಪತ್ರೆಗಳಿಗೆ ಅಲೆದಾಡಿದರೂ ಬೆಡ್ ಸಿಗುತ್ತಿಲ್ಲ, ಇನ್ನೊಂದೆಡೆ ಸಾವನ್ನಪ್ಪಿದರೆ ಚಿತಾಗಾರವೂ ಸಿಗದ ಘೋರ ಪರಿಸ್ಥಿತಿ ಎದುರಾಗಿದೆ. ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಬೆಡ್ ಸಿಗದ ಕಾರಣ ಸೋಂಕಿತ ಮಹಿಳೆಯೊಬ್ಬರು ಆಂಬುಲೆನ್ಸ್ ನಲ್ಲಿ ವಿಧಾನಸೌಧಕ್ಕೆ ಆಗಮಿಸಿರುವ ಘಟನೆ ನಡೆದಿದೆ.

ಮಹಿಳೆಯೊಬ್ಬರು ಕೊರೊನಾ ಸೋಂಕಿನಿಂದ ಬಳಲುತ್ತಿದ್ದು, ಕಳೆದ ಎರಡುದಿನಗಳಿಂದ ಬೆಂಗಳೂರಿನ ಎಲ್ಲಾ ಆಸ್ಪತ್ರೆಗಳಿಗೂ ಅಲೆದಾಡಿದರೂ ಬೆಡ್ ವ್ಯವಸ್ಥೆ ಸಿಕ್ಕಿಲ್ಲ. ಇದರಿಂದ ಬೇಸತ್ತ ಕುಟುಂಬದವರು ಸೋಂಕಿತ ಮಹಿಳೆಯನ್ನು ಆಂಬುಲೆನ್ಸ್ ಮೂಲಕ ವಿಧಾನಸೌಧಕ್ಕೇ ಕರೆತಂದಿದ್ದಾರೆ.ಬೆಡ್ ವ್ಯವಸ್ಥೆ ಮಾಡಿಸುವಂತೆ ವಿಧಾನಸೌಧದ ಮುಂದೆ ಕುಳಿತು ಧರಣಿ ನಡೆಸಿದ್ದಾರೆ. ಎರಡು ದಿನದಿಂದ ಬೆಡ್ ಗಾಗಿ ಪರದಾಡುತ್ತಿದ್ದೇವೆ ಮಹಿಳೆಯ ಸ್ಥಿತಿ ಗಂಭೀರವಾಗಿದೆ. ಆಸ್ಪತ್ರೆಯಲ್ಲಿ ಬೆಡ್ ವ್ಯವಸ್ಥೆ ಮಾಡಿಸಿಕೊಡುವಂತೆ ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಎಚ್ಚೆತ್ತ ಪೊಲಿಸರು ವಿಕ್ಟೋರಿಯಾ ಆಸ್ಪತ್ರೆಗೆ ಕರೆ ಮಾಡಿ ಬೆಡ್ ವ್ಯವಸ್ಥೆ ಮಾಡಿಸಿ, ಸೋಂಕಿತ ಮಹಿಳೆಯನ್ನು ಆಸ್ಪತ್ರೆಗೆ ಕಳುಹಿಸಿದ್ದಾರೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ