ಲಕ್ನೋ: ಮಹಿಳೆಯೊಬ್ಬಳ ಮೃತ ದೇಹ ಸೂಟ್‍ಕೇಸ್‍ನೊಳಗೆ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇದ ಗಾಜಿಯಾಬಾದ್‍ನಲ್ಲಿ ನಡೆದಿದೆ.
ಗಾಜಿಯಾಬಾದ್‍ನ ದಾಶ್ಮೇಶ್ ವಾಟಿಕಾ ಪ್ರದೇಶದಲ್ಲಿ ಶವ ಪತ್ತೆಯಾಗಿದೆ. ಮೃತ ಮಹಿಳೆಯನ್ನು ಸುಮಾರು 25 ರಿಂದ 30 ವರ್ಷ ವಯಸ್ಸು ಎಂದು ಅಂದಾಜಿಸಲಾಗಿದೆ. ಆದರೆ ಮೃತ ಮಹಿಳೆಯ ಗುರುತು ಮಾತ್ರ ಇನ್ನೂ ಪತ್ತೆಯಾಗಿಲ್ಲ.
ಸ್ಥಳೀಯರು ಸೂಟ್‍ಕೇಸ್ ನೋಡಿ ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಮಹಿಳೆ ಮೃತದೇಹವನ್ನು ಸೂಟ್‍ಕೇಸ್ ಒಳಗೆ ತುಂಬಿಸಲಾಗಿತ್ತು. ಮಹಿಳೆಯ ದೇಹದಲ್ಲಿ ಹಲವಾರು ಗಾಯದ ಗುರುತುಗಳಿವೆ. ಮೃತ ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸ್ ಅಧಿಕಾರಿ ಅಲೋಕ್ ಸಿಂಗ್ ತಿಳಿಸಿದ್ದಾರೆ.
ಮಹಿಳೆ ವಿವಾಹವಾಗಿದ್ದು, ಆಕೆಯ ಆಪ್ತ ಸಂಬಂಧಿಯೊಬ್ಬರು ಈ ಘಟನೆಯ ಹಿಂದೆ ಇದ್ದಾರೆ ಎಂದು ಪೊಲೀಸರು ಶಂಕಿಸಲಾಗಿದೆ. ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಸದ್ಯಕ್ಕೆ ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲನೆ ಮಾಡಲಾಗುತ್ತಿದೆ ಎಂದು ಅಲೋಕ್ ಸಿಂಗ್ ಹೇಳಿದ್ದಾರೆ.