ಬೆಂಗಳೂರು: ರಾಜ್ಯದಲ್ಲಿ ಜಾರಿಯಲ್ಲಿರುವ ಜನತಾ ಕರ್ಫ್ಯೂ ಅಷ್ಟೇನೂ ಪರಿಣಾಮಕಾರಿಯಾಗಿಲ್ಲ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ ಹೇಳುವ ಮೂಲಕ ಲಾಕ್ ಡೌನ್ ಹೇರುವ ಮುನ್ಸೂಚನೆ ಕೊಟ್ಟಿದ್ದಾರೆ. 12 ನೇ ತಾರೀಖಿನಂದು ಜಾರಿಯಲ್ಲಿರುವ ಕರ್ಫ್ಯೂ ಮುಕ್ತಾಯವಾಗಲಿದ್ದು, ಇನ್ನೆರಡು ದಿನಗಳಲ್ಲಿ ಮುಂದಿನ ನಿರ್ಧಾರವನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಹೇಳಲಾಗಿದೆ.
ಕೊರೊನಾ ಸೋಂಕಿನ ಪ್ರಮಾಣ ನಿಯಂತ್ರಣಕ್ಕೆ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಸರ್ಕಾರದ ಹಿರಿಯ ಅಧಿಕಾರಿಗಳು ಕೇಂದ್ರ ಸರ್ಕಾರದೊಂದಿಗೆ ಚರ್ಚೆ ಮಾಡಿದ್ದು, ಮುಂದಿನ ರೂಪರೇಷೆಗಳನ್ನು ಸಿದ್ದಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಸೇರಿ ಹಲವು ಸಚಿವರು, ಶಾಸಕರು ಲಾಕ್ ಡೌನ್ ಮಾಡಬೇಕು ಎನ್ನುವ ಅಭಿಪ್ರಾಯ ಹೊರಹಾಕಿದ್ದು, ಇತ್ತ ಸರ್ಕಾರದಲ್ಲಿನ ಆರೋಗ್ಯ ಸಚಿವ ಸುಧಾಕರ ಕೂಡ ಲಾಕ್ ಡೌನ್ ಮಾಡುವ ಸುಳಿವು ನೀಡಿದ್ದಾರೆ. ಈ ಬಗ್ಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಜೊತೆಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ತುಂಬಾ ವಿಶೇಷ ಹಾಗೂ ನಿಖರತೆ ಹೊಂದಿರುವ ನ್ಯೂಸ್ ಆಪ್ ಡೌನ್ಲೋಡ್ ಮಾಡಿಕೊಳ್ಳಿ…