Breaking News

ವೈದ್ಯರ ವಿರುದ್ಧ ಪೋಸ್ಟ್; ಕಾಮಿಡಿಯನ್ ಸುನಿಲ್ ಪಾಲ್ ವಿರುದ್ಧ ದೂರು ದಾಖಲು

Spread the love

ಖ್ಯಾತ ಕಮಿಡಿಯನ್ ಸುನಿಲ್ ಪಾಲ್ ವಿರುದ್ಧ ಮುಂಬೈನ ಅಂಧೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಾಮಿಡಿಯನ್ ಸುನಿಲ್ ಪಾಲ್ ಅವರು ಸಾಮಾಜಿಕ ಜಾಲತಾಣದಲ್ಲಿ ಪ್ರಸ್ತುತ ಕೋವಿಡ್ ಸನ್ನಿವೇಶದ ಬಗ್ಗೆ ವಿಡಿಯೋ ಮಾಡಿ ಮಾತನಾಡುತ್ತಾ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರನ್ನು ರಾಕ್ಷಸರು, ಕಳ್ಳರು ಎಂದು ಕರೆದಿದ್ದರು. ಇದೇ ಕಾರಣಕ್ಕೆ ಅವರ ವಿರುದ್ಧ ದೂರು ದಾಖಲಾಗಿದೆ.

‘ಕೋವಿಡ್ ಸನ್ನಿವೇಶದಲ್ಲಿ ವೈದ್ಯರು ರೋಗಿಗಳಿಂದ ಹಣ ಕೀಳುತ್ತಿದ್ದಾರೆ. ಬಿಳಿ ಬಟ್ಟೆ ಧರಿಸಿದ ರಾಕ್ಷಸರಂತೆ ವರ್ತಿಸುತ್ತಿದ್ದಾರೆ. ವೈದ್ಯರು ಹಗಲು ದರೋಡೆ ಮಾಡುತ್ತಿದ್ದಾರೆ’ ಎಂದು ಸುನಿಲ್ ಪಾಲ್ ತಮ್ಮ ವಿಡಿಯೋದಲ್ಲಿ ಹೇಳಿದ್ದರು.

ವಿಡಿಯೋವನ್ನು ಆಧಾರವಾಗಿಟ್ಟುಕೊಂಡು ಮುಂಬೈ ಮೆಡಿಕಲ್ ಅಸೋಸಿಯೇಷನ್‌ನ ಅಧ್ಯಕ್ಷೆ ವೈದ್ಯೆ ಸುಶ್ಮಿತಾ ಅವರು ಅಂಧೇರಿ ಪೊಲೀಸ್ ಠಾಣೆಯಲ್ಲಿ ಸುನಿಲ್ ಪಾಲ್ ವಿರುದ್ಧ ದೂರು ದಾಖಲಿಸಿದ್ದಾರೆ.

ದೂರು ದಾಖಲಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸುನಿಲ್ ಪಾಲ್, ‘ನನ್ನ ಹೇಳಿಕೆಗೆ ನಾನು ಬದ್ಧವಾಗಿದ್ದೇನೆ. ಶೇ 90 ರಷ್ಟು ವೈದ್ಯರು ಹಗಲು ದರೋಡೆಗೆ ಇಳಿದಿದ್ದಾರೆ. ಕೇವಲ 10% ವೈದ್ಯರಷ್ಟೆ ನಿಸ್ವಾರ್ಥವಾಗಿ ಸೇವೆ ಮಾಡುತ್ತಿದ್ದಾರೆ’ ಎಂದಿದ್ದಾರೆ.

ಮುಂದುವರೆದು, ‘ನಾನು ಮತ್ತೊಂದು ವಿಡಿಯೋ ಮಾಡಿ ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ. ದಾಖಲಾಗಿರುವ ದೂರನ್ನು ಕಾನೂನು ರೀತ್ಯಾ ಎದುರಿಸುತ್ತೇನೆ’ ಎಂದಿದ್ದಾರೆ.

ಸುನಿಲ್ ಪಾಲ್ ವಿರುದ್ಧ ಭಾರತೀಯ ದಂಡ ಸಂಹಿತೆ ಅಡಿ ಮಾನಹಾನಿ, ಸಾರ್ವಜನಿಕ ದುರ್ವರ್ತನೆ ಪ್ರಕರಣಗಳು ದಾಖಲಿಸಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ