Breaking News

ಕೊರೋನಾ ಸೋಂಕಿಗೆ ‘ಜೆಡಿಎಸ್ ಪಕ್ಷದ ಪರಿಶಿಷ್ಟ ಜಾತಿ ಘಟಕದ ರಾಜ್ಯಾಧ್ಯಕ್ಷ ಆನಂದ್’ ಬಲಿ

Spread the love

ಬೆಂಗಳೂರು : ಕೊರೋನಾ ಸೋಂಕಿಗೆ ತುತ್ತಾಗಿದ್ದಂತ ಜೆಡಿಎಸ್ ಪಕ್ಷದ ಪರಿಶಿಷ್ಟ ಜಾತಿ ಘಟಕದ ರಾಜ್ಯಾಧ್ಯಕ್ಷರಾದ ಆನಂದ್ ಸಾವನ್ನಪ್ಪಿದ್ದಾರೆ.

ಈ ಕುರಿತಂತೆ ಟ್ವಿಟ್ ಮೂಲಕ ಸಂತಾಪ ಸೂಚಿಸಿರುವಂತ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಜೆಡಿಎಸ್ ಪಕ್ಷದ ಪರಿಶಿಷ್ಟ ಜಾತಿ ಘಟಕದ ರಾಜ್ಯಾಧ್ಯಕ್ಷರಾದ ಆನಂದ ಅವರು ಕೊರೋನಾ ಸೋಂಕಿಗೆ ತುತ್ತಾಗಿ ವಿಧಿವಶರಾಗಿದ್ದು ಅತ್ಯಂತ ನೋವಿನ ಸಂಗತಿ. ಇವರ ನಿಧನದಿಂದ ಕ್ರಿಯಾಶೀಲ ಯುವ ಮುಖಂಡರನ್ನು ಪಕ್ಷ ಕಳೆದುಕೊಂಡಂತಾಗಿದೆ. ಅವರ ಕುಟುಂಬದವರಿಗೆ ಮೃತರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ