Breaking News

72 ಸಾವಿರದ ಗಡಿ ತಲುಪಿದ ಬೆಳ್ಳಿ ದರ; ಚಿನ್ನದ ಬೆಲೆಯೂ ಏರಿಕೆ

Spread the love

ಇನ್ನೇನು ಮದುವೆಯ ಸೀಸನ್ ಶುರುವಾಗುವ ಸಮಯ. ಕಳೆದೆರಡು ದಿನಗಳಿಂದ ಚಿನ್ನದ ಬೆಲೆ ಕೊಂಚ ಏರಿಕೆಯಾಗುತ್ತಿದೆ. ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ಇಂದು ಯಾವ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನ್ನೆ 48,000 ರೂ. ಇದ್ದುದು ಇಂದು 48,550 ರೂ.ಗೆ ಏರಿಕೆಯಾಗಿದೆ. 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ 44,000 ರೂ. ಇದ್ದುದು ಇಂದು 44,500 ರೂ. ಆಗಿದೆ. ಬೆಳ್ಳಿ ದರ ಇಂದು ಭಾರೀ ಏರಿಕೆಯಾಗಿದ್ದು, ನಿನ್ನೆ 69,900 ರೂ. ಇದ್ದ ಬೆಳ್ಳಿ ಬೆಲೆ ಇಂದು 71,900 ರೂ. ಆಗಿದೆ. ಈ ಮೂಲಕ ಒಂದೇ ದಿನದಲ್ಲಿ 1 ಕೆಜಿ ಬೆಳ್ಳಿಗೆ 2,000 ರೂ. ಹೆಚ್ಚಾಗಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಕೊಂಚ ಏರಿಕೆಯಾಗಿದ್ದು, ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 44,290 ರೂ. ಇದ್ದುದು ಇಂದು 44,300 ರೂ.ಗೆ ಏರಿಕೆಯಾಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 45,290 ರೂ. ಇದ್ದುದು ಇಂದು 45,300 ರೂ. ಆಗಿದೆ. ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 48,550 ರೂ. ಆಗಿದೆ. ಹಾಗೇ, 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಇಂದು 44,500 ರೂ. ಆಗಿದೆ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ. ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ ಭಾರೀ ಏರಿಕೆಯಾಗಿದೆ. ಈ ನಗರಗಳಲ್ಲಿ ಚಿನ್ನದ ಬೆಲೆ 50,000 ರೂ. ದಾಟಿದೆ.

ಭಾರತದಲ್ಲಿ ಬೆಳ್ಳಿ ಬೆಲೆ ಭಾರೀ ಏರಿಕೆಯಾಗಿದ್ದು, ಬೆಳ್ಳಿ ಬೆಲೆ ಇಂದು 1 ಕೆಜಿಗೆ 71,900 ರೂ. ಆಗಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ ಇಂದು 71,900 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 76,500 ರೂ. ಆಸುಪಾಸಿನಲ್ಲಿದೆ.

ಕಷ್ಟಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವುದು ಈಗಿನ ಪದ್ಧತಿಯಲ್ಲ. ಬಂಗಾರವನ್ನು ಖರೀದಿಸಿಟ್ಟರೆ ನಮ್ಮ ಆಪತ್ಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ ಎಂಬುದು ಬಹುತೇಕ ಎಲ್ಲ ಭಾರತೀಯರ ಲೆಕ್ಕಾಚಾರ. ಹೀಗಾಗಿ, ಕೈಯಲ್ಲಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಇಂದಿಗೂ ಕಡಿಮೆಯಾಗಿಲ್ಲ. ಆದರೆ, ಕೊರೋನಾದಿಂದಾಗಿ ಚಿನ್ನವನ್ನು ಕೊಳ್ಳುವವರ ಸಂಖ್ಯೆ ಹೇಗೆ ಕಡಿಮೆಯಾಯಿತೋ ಅದೇರೀತಿ ಚಿನ್ನದ ಪೂರೈಕೆಯಲ್ಲಿಯೂ ವ್ಯತ್ಯಯವಾಯಿತು. ಇದರಿಂದ ಬಂಗಾರದ ಬೆಲೆ ಗಗನಕ್ಕೇರಿತ್ತು.

ಕೊರೋನಾ ವೈರಸ್​ ಹರಡುವಿಕೆ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್​ ಎಸ್ಟೇಟ್​ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್​ಡೌನ್​ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ.


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ