ಮುಂಬೈ: ಎನ್ ಕೌಂಟರ್ ಸ್ಪೆಷಲಿಸ್ಟ್ ಖ್ಯಾತಿಯ ಪೊಲೀಸ್ ಅಧಿಕಾರಿ ದಯಾ ನಾಯಕ್ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳನ್ನು ಮುಂಬೈನಿಂದ ಇತರ ಜಿಲ್ಲೆಗಳಿಗೆ ವರ್ಗಾವಣೆ ಮಾಡಲಾಗಿದೆ.
ಉಗ್ರ ನಿಗ್ರಹ ದಳದಲ್ಲಿದ್ದ ದಯಾ ನಾಯಕ್ ಅವರನ್ನು ಗೊಂಡಿಯಾ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಮಹಾರಾಷ್ಟ್ರ ಎಡಿಜಿ ಅವರು ಈ ವರ್ಗಾವಣೆ ಮಾಡಿ ಆದೇಶಿಸಿದ್ದಾರೆ.
ದಯಾ ನಾಯಕ್ ಅವರು ಮನ್ಸುಖ್ ಹಿರೇನ್ ಕೊಲೆ ಪ್ರಕರಣದ ತನಿಖೆ ನಡೆಸಿದ್ದರು. ಪೊಲೀಸ್ ಅಧಿಕಾರಿ ಸಚಿನ್ ವಾಜೆ ವಿರುದ್ಧ ಈ ಪ್ರಕರಣದಲ್ಲ ದಯಾ ನಾಯಕ್ ಅವರು ಹಲವು ಸಾಕ್ಷ್ಯಗಳನ್ನು ಒಟ್ಟುಗೂಡಿಸಿದ್ದರು. ಸದ್ಯ ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ ತನಿಖೆ ನಡೆಸುತ್ತಿದೆ.
ಸಚಿನ್ ವಾಜೆ ಪ್ರಕರಣ ದೇಶದಲ್ಲಿ ದೊಡ್ಡ ಮಟ್ಟದಲ್ಲಿ ಸಂಚಲನ ಉಂಟು ಮಾಡಿದೆ. ಸದ್ಯ ದಯಾ ನಾಯಕ್ ಸೇರಿದಂತೆ ಹಲವು ಪ್ರಮುಖ ಪೊಲೀಸ್ ಅಧಿಕಾರಿಗಳ ಬೇರೆ ಜಿಲ್ಲೆಗಳಿಗೆ ವರ್ಗಾವಣೆ ಹಲವು ಅನುಮಾನಗಳಿಗೆ ಕಾರಣವಾಗಿದೆ.