Breaking News

ಬೆಟ್ಟದ ಹೂವು’ ಖ್ಯಾತಿಯ ಪೋಷಕ ನಟ, ಹಿರಿಯ ಕಲಾವಿದ ‘ಶಂಖನಾದ’ ಅರವಿಂದ್ ಕೊರೋನಾಗೆ ಬಲಿ

Spread the love

ಬೆಟ್ಟದ ಹೂವು” ಖ್ಯಾತಿಯ ಹಿರಿಯ ಕಲಾವಿದ ಶಂಖನಾದ ಅರವಿಂದ್ (70 ) ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.

13 ದಿನಗಳ ಹಿಂದೆ ಕೊರೊನಾ ಸೊಂಕಿಗೆ ತುತ್ತಾಗಿ ವಿಕ್ಟೊರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಅರವಿಂದ್ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ 1 ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ.

250 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ ಕಲಾವಿದ ಅರವಿಂದ್ ಮೃತಪಟ್ಟಿರುವ ಬಗ್ಗೆ ಅವರ ಪುತ್ರಿ ಮಾನಸ ಹೊಳ್ಳ ತಮ್ಮ ಸಾಮಾಜಿಕ ತಾಣದಲ್ಲಿ ಹಂಚಿಕೊಂಡಿದ್ದಾರೆ. “ಸತತ 13 ದಿನಗಳು ಆಸ್ಪತ್ರೆಯಲ್ಲಿ ಹೋರಾಟ ನಡೆಸಿ ಇಂದು 1 ಘಂಟೆಗೆ ದೈವದೀನರಾಗಿದ್ದಾರೆಂದು ತಿಳಿಸಲು ವಿಶಾದಿಸುತ್ತೇನೆ ನಮ್ಮ ತಂದೆಯವರು Shankhanaada Aravinda Kalarunda Aravind MA” ಎಂದು ಅವರು ಬರೆದುಕೊಂಡಿದ್ದಾರೆ.

ಮೃತರು ಮೂವರು ಮಕ್ಕಳನ್ನು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ,


Spread the love

About Laxminews 24x7

Check Also

ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾದ ಮೆಲೋಡಿ ಹಾಡು ರಿಲೀಸ್..

Spread the love ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾದ ಮೆಲೋಡಿ ಹಾಡು ರಿಲೀಸ್.. ರಾಣಾ-ಪ್ರಿಯಾಂಕಾ ಜೋಡಿಯ ಏಳುಮಲೆ ಸಿನಿಮಾದ‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ