Breaking News

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ಸಿಸಿ ಟಿವಿಯಲ್ಲಿ ಸೆರೆಯಾಯ್ತು ಎದೆ ಝಲ್​ ಎನ್ನಿಸುವ ದೃಶ್ಯ

Spread the love

ಮಂಗಳೂರು: ಕೋವಿಡ್ ಕ್ಲೋಸ್​​ಡೌನ್ ನಡುವೆ ಅತೀ ವೇಗವಾಗಿ ಅಜಾಗರೂಕತೆಯಿಂದ ಬೈಕ್ ಚಾಲನೆ ಮಾಡಿದ ಬೈಕ್ ಸವಾರನೊಬ್ಬ ಅಪಘಾತಕ್ಕೀಡಾದ ಘಟನೆ ಮಂಗಳೂರು ಹೊರವಲಯದ ಪದವಿನಂಗಡಿ ಎಂಬಲ್ಲಿ ನಡೆದಿದೆ.

ಘಟನೆಯಲ್ಲಿ ಬೊಂದೇಲ್ ನಿವಾಸಿ ಪ್ರಶಾಂತ್ ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಎಸೆನ್ಶಿಯಲ್ ಸರ್ವಿಸ್ ಎಂದು ಬೈಕ್ ಮೇಲೆ ಬರೆದು ಕೊಂಡಿದ್ದ ಬೈಕ್ ಸವಾರ, ಇಂದು ಮುಂಜಾನೆ ನಗರದತ್ತ ಬರುತ್ತಿದ್ದಾಗ ರಸ್ತೆ ಬದಿ ಇದ್ದ ಅಂಗಡಿಯೊಂದರ ಆವರಣಕ್ಕೆ ಡಿಕ್ಕಿ ಹೊಡೆದಿದ್ದು, ಸುಮಾರು 8 ಅಡಿ ಗಾಳಿಯಲ್ಲಿ ಹಾರಿ ನೆಲಕ್ಕುರುಳಿ ಬಿದಿದ್ದಾರೆ.

ಖಾಲಿ ರಸ್ತೆಯಲ್ಲಿ ದ್ವಿಚಕ್ರ ಸವಾರನೊಬ್ಬ ಏಕಾಏಕಿ ಪ್ರವೇಶ ಮಾಡಿದ್ದ ಕಾರಣ ಎದುರಿನಿಂದ ವೇಗವಾಗಿ ಬರುತ್ತಿದ್ದ ವಾಹನ ಸವಾರ ಅಪಘಾತವನ್ನು ತಪ್ಪಸಿಲು ಯತ್ನಿಸಿದ್ದಾನೆ. ಆದರೆ ಬೈಕ್ ವೇಗವಾಗಿ ಬರುತ್ತಿದ್ದ ಕಾರಣ ನಿಯಂತ್ರಣ ತಪ್ಪಿ ರಸ್ತೆ ಬದಿಯ ಅಂಗಡಿಯ ಮೆಟ್ಟಿಲಿಗೆ ಡಿಕ್ಕಿಯಾಗಿದೆ. ಈ ಘಟನೆಯ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಂಕನಾಡಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

 


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ