Breaking News

ಎಲ್ಲಾ ಶುರು ಆದ್ರೂ ಎಲ್ಲ ಬಂದ್ ಅಂತೆ ಇದು ಯಾವ ಸೀಮೆ ಲಾಕ್ ಡೌನ್ ಎಂದು ಜನರ ಪ್ರಶ್ನೆ…?

Spread the love

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಹಾಗೂ ಮೃತರ ಸಂಖ್ಯೆ ದಿನೇ ದಿನೇ ಏರುಗತಿಯಲ್ಲಿ ಸಾಗುತ್ತಿರುವುದರಿಂದ, ಇಂದು ತುರ್ತು ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮೇ 10ರಿಂದ 14 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಮಾಡಿ ಆದೇಶ ಹೊರಡಿಸಿದ್ದಾರೆ.

ಸಚಿವರು ಮತ್ತು ಅಧಿಕಾರಿಗಳೊಂದಿಗಿನ ಹಲವು ಸುತ್ತಿನ ಸಭೆಯ ನಂತರ ಸಿಎಂ ಯಡಿಯೂರಪ್ಪ ಅಧಿಕೃತ ನಿರ್ಧಾರವನ್ನು ಇಂದು ಸಂಜೆ 7:30ಕ್ಕೆ ಪ್ರಕಟಿಸಿದ್ದಾರೆ. ಕರ್ನಾಟಕದಲ್ಲಿ ದಿನವೊಂದಕ್ಕೆ ಅರ್ಧ ಲಕ್ಷದಷ್ಟು ಕೋವಿಡ್ ಪ್ರಕರಣಗಳು ದಾಖಲಾಗುತ್ತಿದ್ದು, ಈಗಾಗಲೇ ಮೇ 12ರವರೆಗೂ ಜನತಾ ಕರ್ಫ್ಯೂ ಜಾರಿಯಲ್ಲಿದೆ. ಇದರಿಂದಲೂ ಸೋಂಕಿತರ ಸಂಖ್ಯೆ ನಿಯಂತ್ರಣಕ್ಕೆ ಬಾರದಿದ್ದರಿಂದ ರಾಜ್ಯಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.

ಮಾರ್ಗಸೂಚಿ:

  • ಸೋಮವಾರ ಬೆಳಗ್ಗೆ 6 ಗಂಟೆಯಿಂದ ಮೇ 24ರ ಬೆಳಗ್ಗೆ 6 ಗಂಟೆವರೆಗೆ ಕಠಿಣ ಲಾಕ್​ಡೌನ್​
  • ಬೆಳಗ್ಗೆ 6 ಗಂಟೆಯಿಂದ ಬೆಳಗ್ಗೆ 10 ಗಂಟೆವರೆಗೆ ಮಾತ್ರ ಹಾಲು, ದಿನಸಿ ಅಂಗಡಿಗಳನ್ನು ತೆರೆಯಲು ಅನುಮತಿ
  • ಕೂಲಿ ಕಾರ್ಮಿಕರು ಬೆಂಗಳೂರು ಬಿಟ್ಟು ಹೋಗುವಂತಿಲ್ಲ.
  • ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ತಳ್ಳುವ ಗಾಡಿಯಲ್ಲಿ ತರಕಾರಿ-ಹಣ್ಣುಗಳನ್ನು ಮಾರಲು ಅವಕಾಶ ನೀಡಲಾಗಿದೆ.
  • ಕೈಗಾರಿಕೆ ಹೊಟೇಲ್, ಪಬ್, ಬಾರ್ ಕ್ಲೋಸ್.ಹೋಂ ಡೆಲಿವರಿ ಸೇವೆಗಳನ್ನು ಮಾತ್ರ ಒದಗಿಸಲು ಅನುಮತಿಸಲಾಗುವುದು.
  • ಸರ್ಕಾರಿ ಕಚೇರಿ ಭಾಗಶ‍ಃ ಕೆಲಸ ಮಾಡಲಿದೆ.
  • ಅಗತ್ಯವಸ್ತು ಸಾಗಿಸುವ ವಾಹನಗಳಿಗೆ ಅವಕಾಶವಿದೆ.
  • ಅಂತರ್ ಜಿಲ್ಲಾ ಸಂಚಾರಕ್ಕೆ ಸಂಪೂರ್ಣ ನಿಷೇಧ
  • ಮೇ 10 ರಿಂದ ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳಿಗೆ ಬೀಗ
  • ವಿಮಾನ ರೈಲು ಸಂಚಾರಕ್ಕೆ ಅನುಮತಿ
  • ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆಗೆ ಮದ್ಯ ಮಾರಾಟಕ್ಕೆ ಅವಕಾಶ
  • ಟ್ಯಾಕ್ಸಿ, ಅಟೋ ತುರ್ತು ಸೇವೆಗಳಿಗೆ ಅವಕಾಶ
  • ಸಿನಿಮಾ, ಮಾಲ್, ಜಿಮ್ ಎಲ್ಲವೂ ಮೇ 24 ರವರೆಗೂ ಬಂದ್
  • ತುರ್ತು ವೈದ್ಯಕೀಯ ಸೇವೆ ಹೊರತು ಪಡಿಸಿ ಎಲ್ಲಾ ರೀತಿಯ ಸಂಚಾರಕ್ಕೆ ನಿರ್ಬಂಧವೇರಲಾಗಿದೆ.
  • ಕೃಷಿ ಚಟುವಟಿಕೆಗೆ ಯಾವುದೇ ನಿರ್ಬಂಧವಿಲ್ಲ
  • ತಳ್ಳುಗಾಡಿಗಳಲ್ಲಿ ತರಕಾರಿ ಮಾರಲು ಬೆಳಿಗ್ಗೆ 6 ರಿಂದ ಸಂಜೆ 6ರ ವರೆಗೆ ಅವಕಾಶ
  • ಧಾರ್ಮಿಕ ಕೇಂದ್ರ ಬಂದ್ ಇದ್ದರೂ, ಪೂಜೆ, ಪುರಸ್ಕಾರಕ್ಕೆ ಅವಕಾಶವಿದೆ.
  • ಕ್ರೀಡಾ ಸಮುಚ್ಛಯ, ಸಾರ್ವಜನಿಕ ಈಜುಕೊಳ ಸಂಪೂರ್ಣ ಬಂದ್
  • ಈಗಾಗಲೇ ನಿಗದಿಯಾಗಿದ್ದ ಮದುವೆಗಳಿಗೆ ಅವಕಾಶ
  • ಮದುವೆ ಸಮಾರಂಭಗಳಿಗೆ 50 ಜನರಿಗೆ ಮಾತ್ರ ಅವಕಾಶ
  • ರಸ್ತೆ ಕಾಮಗಾರಿಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ.
  • ಆಸ್ಪತ್ರೆಗಳು, ಮೆಡಿಕಲ್​ ಶಾಪ್​ಗಳು, ಬ್ಯಾಂಕ್​ಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ.
  • ಯಾವುದೇ ಪಾಸ್ ವ್ಯವಸ್ಥೆಯನ್ನು ಜಾರಿಗೆ ತರುವುದಿಲ್ಲ.
  • ಕೈಗಾರಿಕೆಗಳಿಗೆ ಷರತ್ತು ಬದ್ಧ ಅನುಮತಿ
  • ಇ- ಕಾಮರ್ಸ್ ಸೇವೆಗಳಿಗೆ ಅವಕಾಶ
  • ಹೊಟೇಲ್ ಗಳಿಂದ ಪಾರ್ಸೆಲ್ ತರಲು ಹೋಗಬೇಕಾದರೆ ನಡೆದುಕೊಂಡೆ ಹೋಗಬೇಕು. ವಾಹನಗಳಲ್ಲಿ ಹೋದರೆ ಶಿಕ್ಷೆ
  • ಅಗತ್ಯ ಸೇವೆಗಳಿಗೆ ಬಿಟ್ಟು ಅನವಶ್ಯಕವಾಗಿ ವಾಹನಗಳನ್ನು ಚಲಾಯಿಸುವಂತಿಲ್ಲ

Spread the love

About Laxminews 24x7

Check Also

ಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ ಉದ್ಯಾನವನ

Spread the loveಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ