ಬೆಂಗಳೂರು : ರಾಜ್ಯದ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಶಾಲಾ ಮಕ್ಕಳಿಗೆ ಶೈಕ್ಷಣಿಕ ವರ್ಷದ ಆರಂಭದಿಂದಲೂ ಬಿಸಿಯೂಟದ ಬದಲಿಗೆ ಆಹಾರ ಧಾನ್ಯವನ್ನೇ ನೀಡಲಾಗುತ್ತಿದ್ದು, ಬೇಸಿಗೆ ರಜೆಯಲ್ಲೂ ಬಿಸಿಯೂಟದ ಬದಲು ಪಡಿತರ ನೀಡಲು ನಿರ್ಧರಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 1 ರಿಂದ 9 ನೇ ತರಗತಿ ಮೌಲ್ಯಾಂಕನ ಪರೀಕ್ಷೆ ಇಲ್ಲದೇ ತೇರ್ಗಡೆ ಮಾಡಿ ಬೇಸಿಗೆ ರಜೆ ಪ್ರಕಟಿಸಿದೆ. ಬೇಸಿಗೆ ರಜಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟಕ್ಕೆ ಮಾನಾದ ಪಡಿತರ ವಿತರಿಸಲಾಗುತ್ತದೆ ಎಂದು ತಿಳಿದುಬಂದಿದೆ.
ಈಗಾಗಲೇ ಜನವರಿ ಮತ್ತು ಫೆಬ್ರವರಿ ತಿಂಗಳ ವರೆಗಿನ ಪಡಿತರವನ್ನು ವಿದ್ಯಾರ್ಥಿಗಳ ಪಾಲಕ, ಪೋಷಕರಿಗೆ ನೀಡಲಾಗಿದೆ. ಈ ಬಾರಿಯ ಬೇಸಿಗೆ ರಜೆಯಲ್ಲೂ ಬಿಸಿಯೂಟದ ಬದಲಿಗೆ ಪಡಿತರ ನೀಡಲು ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ.
Laxmi News 24×7