Breaking News

ರಾಜ್ಯಾಧ್ಯಂತ ಮೇ.10ರಿಂದ ಮೇ.24ರವರೆಗೆ ಲಾಕ್ ಡೌನ್ : ಈ ವೇಳೆ ಯಾವುದಕ್ಕೆ ಅವಕಾಶ.? ಯಾವುದಕ್ಕೆ ಇಲ್ಲ.? ಇಲ್ಲಿದೆ ಮಾಹಿತಿ

Spread the love

ಬೆಂಗಳೂರು : ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ರಾಜ್ಯಾಧ್ಯಂತ ಮೇ.10 ರಿಂದ ಮೇ.24ರವರೆಗೆ ಸಂಪೂರ್ಣ ಲಾಕ್ ಡೌನ್ ಅನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ. ಪರಿಷ್ಕೃತ ಮಾರ್ಗಸೂಚಿಯಂತೆ ಮೇ.10ರ ಬೆಳಿಗ್ಗೆ 6 ಗಂಟೆಯಿಂದ ಮೇ.24ರ ಬೆಳಿಗ್ಗೆ 6 ಗಂಟೆಯವರೆಗೆ ಯಾವುದಕ್ಕೆ ಅವಕಾಶ ನೀಡಲಾಗಿದೆ.? ಯಾವುದಕ್ಕೆ ಅವಕಾಶ ನೀಡಲಾಗಿಲ್ಲ ಎನ್ನುವ ಬಗ್ಗೆ ಮುಂದೆ ಓದಿ.

ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ನಿಯಂತ್ರಣಕ್ಕಾಗಿ ಮೊದಲು ನೈಟ್ ಕರ್ಪ್ಯೂ, ಆನಂತ್ರದ ವಾರಾಂತ್ಯ ಸಂಪೂರ್ಣ ಕರ್ಪ್ಯೂ ಬಳಿಕ, ಕೊರೋನಾ ಕರ್ಪ್ಯೂ ಜಾರಿಗೊಳಿಸಲಾಗಿತ್ತು. ಆದ್ರೇ.. ಕೊರೋನಾ ಮಾತ್ರ ಕಂಟ್ರೋಲ್ ಆಗಲೇ ಇಲ್ಲ. ದಿನವೊಂದಕ್ಕೆ ಅರ್ಧ ಲಕ್ಷ ಸಮೀಪದಷ್ಟು ಜನರಿಗೆ ಹೊಸದಾಗಿ ಕೊರೋನಾ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಡುತ್ತಿತ್ತು. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮೇ.10ರ ಬೆಳಿಗ್ಗೆ 6 ರಿಂದ ಮೇ.24ರ ಬೆಳಿಗ್ಗೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿದ್ದಾರೆ.

ರಾಜ್ಯಾದ್ಯಂತ ಜಾರಿಯಾಗಿರುವಂತ ಸಂಪೂರ್ಣ ಲಾಕ್ ಡೌನ್ ಕುರಿತಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ಪರಿಷ್ಕೃತ ಮಾರ್ಗಸೂಚಿ ಕೂಡ ಹೊರಡಿಸಿದ್ದು, ಅದರಂತೆ ಲಾಕ್ ಡೌನ್ ಸಂದರ್ಭದಲ್ಲಿ ಯಾವುದಕ್ಕೆ ಅವಕಾಶ.? ಯಾವುದಕ್ಕೆ ಅವಕಾಶವಿಲ್ಲ ಎನ್ನುವ ಬಗ್ಗೆ ಮಾಹಿತಿ ಈ ಕೆಳಗಿದೆ.

ಲಾಕ್ ಡೌನ್ ಸಂದರ್ಭದಲ್ಲಿ ಯಾವುದಕ್ಕೆ ಅವಕಾಶ.?

  • ನಿಗದಿಯಾಗಿರುವ ವಿಮಾನ ಮತ್ತು ರೈಲುಗಳ ಓಡಾಟಕ್ಕೆ ಅವಕಾಶ
  • ಟ್ಯಾಕ್ಸಿ, ಆಟೋ ರಿಕ್ಷಾಗಳು ತುರ್ತು ಸಂದರ್ಭಗಳಲ್ಲಿ ಹಾಗೂ ಮಾರ್ಗಸೂಚಿಯಲ್ಲಿ ಅನುಮತಿಸಿದ ರೀತಿಯಲ್ಲಿ ಅವಕಾಶ
  • ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಮಳಿಗೆಗಳು ಪಾರ್ಸಲ್ ಹಾಗೂ ಹೋಂ ಡೆಲಿವರಿ ಸೇವೆಗೆ ಅವಕಾಶ
  • ರಾಜ್ಯ ಮತ್ತು ಕೇಂದ್ರ ಸರ್ಕಾರದ ಅಗತ್ಯ ಸೇವೆ ನೀಡುವ ಕಚೇರಿಗಳನ್ನು ತೆರೆಯಲು ಅನುಮತಿ
  • ಎಲ್ಲಾ ಆರೋಗ್ಯ ಸೇವಾ ಸೌಲಭ್ಯಗಳು ಮತ್ತು ಸಂಬಂಧಿತ ಸೇವೆಗೆ ಅವಕಾಶ
  • ಎಲ್ಲಾ ಕೃಷಿ ಮತ್ತು ಪೂರಕ ಚಟುವಟಿಕೆಗಳು, ಮೀನುಗಾರಿಕೆ, ಕೋಳಿ ಸಾಕಾಣಿಕೆ, ಮಾಂಸ ಮತ್ತು ಹೈನುಗಾರಿಕೆಗೆ ಸಂಬಂಧಿಸಿದ ಚಟುವಟಿಕೆಗೆ ಅವಕಾಶ
  • ಎಲ್ಲಾ ಸರಕು ಸಾಗಾಣಿಕೆ ವಾಹನಗಳ ಮುಕ್ತ ಸಂಚಾರಕ್ಕೆ ಅನುಮತಿ
  • ಆಹಾರ ಸಾಮಗ್ರಿ, ದಿನಸಿ, ಹಣ್ಣು-ತರಕಾರಿ, ಮಾಂಸ ಮತ್ತು ಮೀನಿನ ಮಳಿಗೆಗಳು ಮತ್ತು ಪಶು ಆಹಾರದ ಮಳಿಗೆಗಳು ಬೆಳಿಗ್ಗೆ 6 ರಿಂದ ಬೆಳಿಗ್ಗೆ 10 ಗಂಟೆ ವರೆಗೆ ತೆರೆಯಲು ಅವಕಾಶ.
  • ಹಾಲಿನ ಬೂತ್, ತಳ್ಳುಗಾಡಿಗಳಲ್ಲಿ ತರಕಾರಿ ಮಾರಾಟಕ್ಕೆ ಬೆಳಿಗ್ಗೆ 6 ರಿಂದ ಸಂಜೆ 6ರವರೆಗೆ ಅವಕಾಶ
  • ನ್ಯಾಯಬೆಲೆ ಅಂಗಡಿಗಳು, ಮದ್ಯ ಮಾರಾಟ ಮಳಿಗೆಗಳು ಕೇವಲ ಪಾರ್ಸೆಲ್ ಸೇವೆಗಾಗಿ ಬೆಳಿಗ್ಗೆ 6 ರಿಂದ 10ರವರೆಗೆ ಅವಕಾಶ
  • ದಿನದ 24 ಗಂಟೆಯೂ ಅಗತ್ಯ ವಸ್ತುಗಳ ಹೋಂ ಡೆಲಿವರಿ ಸೇವೆಗೆ ಅವಕಾಶ
  • ದೂರ ಸಂಪರ್ಕ, ಇಂಟರ್ ನೆಟ್, ಪ್ರಸಾರ ಮತ್ತು ಕೇಬಲ್ ಸೇವೆಗಳಿಗೆ ಅನುಮತಿ
  • ಐಟಿ ಮತ್ತು ಐಟಿಇಎಸ್ ಕಂಪನಿಗಳ ಅಗತ್ಯ ಸಿಬ್ಬಂದಿ ಮಾತ್ರ ಕಚೇರಿಗಳಲ್ಲಿ ಕಾರ್ಯ ( ಇತರ ಸಿಬ್ಬಂದಿ ಮನೆಯಿಂದಲೇ ಕಾರ್ಯನಿರ್ವಹಿಸಬೇಕು)
  • ಸ್ಥಳದಲ್ಲಿಯೇ ಕಾರ್ಮಿಕರು, ಸಿಬ್ಬಂದಿ ಲಭ್ಯವಿರುವ ಕೈಗಾರಿಕೆಗಳು, ಉತ್ಪಾದನಾ ಘಟಕಗಳನ್ನು ತೆರೆಯಲು ಅವಕಾಶ
  • ಸ್ಥಳದಲ್ಲಿಯೇ ಕಾರ್ಮಿಕರು, ಕೆಲಸಗಾರರನ್ನು ಹೊಂದಿರುವ ನಿರ್ಮಾಣ ಚಟುವಟಿಕೆ ಹಾಗೂ ರಸ್ತೆ ಕಾಮಗಾರಿ ನಡೆಸಲು ಅನುಮತಿ
  • ಅಗತ್ಯ ವಸ್ತುಗಳ ತಯಾರಿಕಾ ಘಟಕ, ನಿರಂತರ ಕಾರ್ಯನಿರ್ವಹಣೆಯ ಅಗತ್ಯವಿರುವ ತಯಾರಿಕಾ ಘಟಕ ತೆರೆಯಲು ಅನುಮತಿ
  • ಅಂತ್ಯ ಸಂಸ್ಕಾರದಲ್ಲಿ ಗರಿಷ್ಠ 5 ಜನರಿಗೆ ಅವಕಾಶ
  • ಮದುವೆ ಸಮಾರಂಭಗಳಲ್ಲಿ ಗರಿಷ್ಠ 50 ಜನರಿಗೆ ಮಾತ್ರ ಭಾಗವಹಿಸಲು ಅವಕಾಶ

ಲಾಕ್ ಡೌನ್ ಸಂದರ್ಭದಲ್ಲಿ ಯಾವುದಕ್ಕೆ ಅವಕಾಶ.?

  • ಬಸ್, ಮೆಟ್ರೋ ರೈಲು ಸಂಚಾರಕ್ಕೆ ಅವಕಾಶವಿಲ್ಲ
  • ಶಾಲೆ, ಕಾಲೇಜುಗಳು, ಶಿಕ್ಷಣ, ಕೋಚಿಂಗ್ ಸಂಸ್ಥೆಗಳ ತರಗತಿಗಳು ನಡೆಸೋದಕ್ಕೆ ಅವಕಾಶ ಇಲ್ಲ
  • ಸಿನೆಮಾ ಹಾಲ್, ಶಾಂಪಿಂಗ್ ಮಾಲ್, ಜಿಮ್, ಕ್ರೀಡಾ ಸಂಕೀರ್ಣಗಳು, ಕ್ರೀಡಾಂಗಣ, ಈಜುಕೊಳ, ಉದ್ಯಾನವನಗಳು, ಮನರಂಜನಾ ಪಾರ್ಕ್, ಕ್ಲಬ್, ಥಿಯೇಟರ್, ಬಾರ್ ಮತ್ತು ಸಭಾಂಗಣ, ಸಮುದಾಯ ಭವನಗಳಂತಹ ಸ್ಥಳಗಳು ಮುಚ್ಚಲಿವೆ.
  • ಎಲ್ಲಾ ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು ಮೊದಲಾದ ಹೆಚ್ಚಿನ ಜನ ಸೇರಿವ ಕಾರ್ಯಕ್ರಮಗಳು, ಸಮಾವೇಶಗಳ ನಿಷೇಧ
  • ಎಲ್ಲಾ ಧಾರ್ಮಿಕ ಸ್ಥಳಗಳು, ಪೂಜಾ ಸ್ಥಳಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧ
  • ಸಾರ್ವಜನಿಕರ ಓಡಾಟ ಕಡ್ಡಾಯವಾಗಿ ನಿಷೇಧ ( ಕೆಲವು ವಿನಾಯಿತಿಗಳನ್ನು ಮಾತ್ರ ನೀಡಲಾಗಿದೆ)
  • ಮಾರ್ಗಸೂಚಿಯಲ್ಲಿ ಅನುಮತಿಸಿದ ಸಂದರ್ಭಗಳನ್ನು ಹೊರತುಪಡಿಸಿ, ಸರ್ಕಾರಿ ಹಾಗೂ ಖಾಸಗಿ ಬಸ್ ಗಳು ಹಾಗೂ ಇತರ ಪ್ರಯಾಣಿಕರ ವಾಹನಗಳ ಸಂಚಾರವನ್ನು ನಿಷೇಧಿಸಿದೆ.


Spread the love

About Laxminews 24x7

Check Also

ಆರ್​ಟಿಒ ಅಧಿಕಾರಿಗಳಿಂದ 98 ಆಟೋಗಳು ಜಪ್ತಿ

Spread the loveಬೆಂಗಳೂರು: ನಿಗದಿ ಮಾಡಿದ್ದ ಪ್ರಯಾಣ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡಿ ಕಾನೂನು ಬಾಹಿರವಾಗಿ ಆಟೋ ಚಾಲನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ