Breaking News

ಬೆಳಗಾವಿಗೆ ರೆಮಿಡಿಸಿವರ್ ಹಂಚಿಕೆಯಲ್ಲಿ ತಾರತಮ್ಯ: ಲಕ್ಷ್ಮಿ ಹೆಬ್ಬಾಳಕರ್

Spread the love

ಬೆಳಗಾವಿ: ಕೋವಿಡ್ ಸೋಂಕಿತರಿಗೆ ನೀಡಲಾಗುವ ರೆಮಿಡಿಸಿವರ್ ಇಂಜಕ್ಷನ್ ಹಂಚಿಕೆಯಲ್ಲಿ ಬೆಳಗಾವಿ ಜಿಲ್ಲೆಗೆ ಭಾರಿ ತಾರತಮ್ಯ ಮಾಡಲಾಗುತ್ತಿದ್ದು, ಕೂಡಲೇ ಸರಿಪಡಿಸಬೇಕು ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಆಗ್ರಹಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಶುಕ್ರವಾರ ರಾಜ್ಯಕ್ಕೆ ಒಟ್ಟು 40 ಸಾವಿರ ರೆಮಿಡಿಸಿವರ್ ಇಂಜಕ್ಷನ್ ಹಂಚಿಕೆಯಾಗಿದ್ದರೂ ಬೆಳಗಾವಿ ಜಿಲ್ಲೆಗೆ ಕಳೆದ 3 ದಿನಕ್ಕೆ ಕೇವಲ 400 ನೀಡಲಾಗಿದೆ. ಜಿಲ್ಲೆಯಲ್ಲಿ ಈಗ ಬರುತ್ತಿರುವ ಕೋವಿಡ್ ಸೋಂಕು ಪ್ರಕರಣದ ಪ್ರಮಾಣ ನೋಡಿದರೆ ದಿನಕ್ಕೆ ಕನಿಷ್ಠ 2,700 ಇಂಜಕ್ಷನ್ ಬೇಕಾಗುತ್ತದೆ. ಆದರೆ 3 ದಿನ ಸೇರಿ ಕೇವಲ 400 ಹಂಚಿಕೆಯಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯಲ್ಲಿ ಸರಾಸರಿ 900ಕ್ಕಿಂತ ಹೆಚ್ಚು ಸೋಂಕು ಪ್ರಕರಣ ಪತ್ತೆಯಾಗುತ್ತಿದೆ. ಇದರಲ್ಲಿ ಅರ್ಧದಷ್ಟು ಜನರಿಗೆ ಇಂಜಕ್ಷನ್ ಅಗತ್ಯವೆಂದು ಪರಿಗಣಿಸಿದರೂ 450 ಜನರಿಗೆ ತಲಾ 6ರಂತೆ 2700 ಇಂಜಕ್ಷನ್ ಬೇಕಾಗುತ್ತದೆ. ಆದರೆ 3 ದಿನ ಸೇರಿ 400 ಹಂಚಿಕೆ ಮಾಡಿದರೆ ಯಾವುದಕ್ಕೆ ಸಾಕಾಗುತ್ತದೆ ಎಂದು ಪ್ರಶ್ನಿಸಿರುವ ಅವರು ಇಂಜಕ್ಷನ್ ಸಿಗದೆ ಜನ ಸಾಯುತ್ತಿದ್ದಾರೆ. ಬೆಳಗಾವಿಗೆ ಬೇರೆ ಜಿಲ್ಲೆಗಳಿಗಿಂತ ಹೆಚ್ಚು ಪೂರೈಸುವ ಬದಲು ಕಡಿಮೆ ಪೂರೈಸಲಾಗುತ್ತಿದೆ. ಈ ತಾರತಮ್ಯವನ್ನು ಕೂಡಲೇ ಸರಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ


Spread the love

About Laxminews 24x7

Check Also

ರಮೇಶ್ ಜಾರಕಿಹೊಳಿ ಅವರಿಂದ ಇಂಗ್ಲೆಂಡ್‌ನಲ್ಲಿರುವ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಭೇಟಿ.

Spread the love ರಮೇಶ್ ಜಾರಕಿಹೊಳಿ ಅವರಿಂದ ಇಂಗ್ಲೆಂಡ್‌ನಲ್ಲಿರುವ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಭೇಟಿ. ವಿದೇಶ ಪ್ರವಾಸದಲ್ಲಿರುವ ಜನನಾಯಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ