Breaking News

ರಾಜ್ಯ ಬಿಜೆಪಿಯಲ್ಲಿ ಆಂತರಿಕ ಬೇಗುದಿ : ಹೈಕಮಾಂಡ್ ಕಡೆ ಬೊಮ್ಮಾಯಿ ನಡೆ

Spread the love

ಬೆಂಗಳೂರು: ಕೊರೊನಾ ವೈರಸ್‌ ಎರಡನೇ ಅಲೆಯಿಂದಾಗಿ ರಾಜ್ಯದ ಜನರು ಆತಂಕಕ್ಕೆ ಸಿಲುಕಿದ್ದಾರೆ. ಈ ಮಧ್ಯೆ ರಾಜ್ಯ ಬಿಜೆಪಿಯಲ್ಲಿ ಆಂತರಿಕ ಬೇಗುದಿಯೂ ಹೆಚ್ಚಾಗುತ್ತಿದ್ದು, ಎಲ್ಲ ಬೆಳವಣಿಗೆಗಳ ವಿವರಣೆ ನೀಡಲು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಬಿ.ವೈ ವಿಜಯೇಂದ್ರ ಅವರು ಹೈಕಮಾಂಡ್ ಭೇಟಿಗೆ ತೆರಳಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಆಕ್ಸಿಜನ್ ವಿಚಾರದಲ್ಲಿ ಸುಪ್ರೀಂಕೋರ್ಟ್ ನಲ್ಲಿ ಮುಖಭಂಗ, ಉಪ ಚುನಾವಣೆ ಫ‌ಲಿತಾಂಶ, ಚಾಮರಾಜನಗರ ದುರಂತ ಹಾಗೂ ಬೆಂಗಳೂರಿನಲ್ಲಿ ಬೆಡ್‌ ಬ್ಲಾಕಿಂಗ್ ಪ್ರಕರಣದ ಬಗ್ಗೆ ಬಿಜೆಪಿ ಹೈಕಮಾಂಡ್ ಬೇಸರಗೊಂಡಿದೆ. ಅಷ್ಟೇ ಅಲ್ಲದೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ರಾಜ್ಯ ಸರ್ಕಾರದ ವಿರುದ್ಧವೇ ಮಾತನಾಡಿದ್ದಲ್ಲದೆ, ಪಕ್ಷ ಹೈಕಮಾಂಡ್ ನಾಯಕ ಜೆ.ಪಿ. ನಡ್ಡಾರಿಗೆ ವರದಿಯನ್ನೂ ನೀಡಿದ್ದರು ಎಂದು ಹೇಳಲಾಗಿತ್ತು.

ಈ ಎಲ್ಲ ಬೆಳವಣಿಗೆಯಿಂದಾಗಿ ಸರ್ಕಾರ ತೆಗೆದುಕೊಂಡ ಕ್ರಮಗಳನ್ನು ತಿಳಿಸಲು ಸಿಎಂ ಯಡಿಯೂರಪ್ಪ ಅವರು ಬಸವರಾಜ ಬೊಮ್ಮಾಯಿ ಹಾಗೂ ಪುತ್ರ ವಿಜಯೇಂದ್ರ ಅವರನ್ನು ದೆಹಲಿಗೆ ಕಳುಹಿಸಿದ್ದಾರೆ ಎನ್ನಲಾಗಿದೆ. ಸಚಿವರ ಜೊತೆಗೆ ರಾಜ್ಯ ಸರ್ಕಾರದ ಅಡ್ವೊಕೇಟ್ ಜನರಲ್‌ ಪ್ರಭುಲಿಂಗ ನಾವಡಗಿ ಇದ್ದಾರೆ ಎಂದು ಗೃಹ ಸಚಿವರ ಆಪ್ತ ಮೂಲಗಳಿಂದ ಮಾಹಿತಿ ಲಭಿಸಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ