Breaking News
Home / ಜಿಲ್ಲೆ / ಬೆಂಗಳೂರು / ‘ಸಿಟಿ ಸ್ಕ್ಯಾನ್’ ಮಾಡಿಸುವ ರೋಗಿಗಳಿಗೆ ಬಿಗ್ ಶಾಕ್ : ‘ಸಿಟಿ ಸ್ಕ್ಯಾನಿಂಗ್’ ದರ ಹೆಚ್ಚಳ ಮಾಡಿ ರಾಜ್ಯ ಸರ್ಕಾರದಿಂದ ಆದೇಶ

‘ಸಿಟಿ ಸ್ಕ್ಯಾನ್’ ಮಾಡಿಸುವ ರೋಗಿಗಳಿಗೆ ಬಿಗ್ ಶಾಕ್ : ‘ಸಿಟಿ ಸ್ಕ್ಯಾನಿಂಗ್’ ದರ ಹೆಚ್ಚಳ ಮಾಡಿ ರಾಜ್ಯ ಸರ್ಕಾರದಿಂದ ಆದೇಶ

Spread the love

ಬೆಂಗಳೂರು : ಖಾಸಗಿ ಆಸ್ಪತ್ರೆಗಳಲ್ಲಿ ಸಿ.ಟಿ. ಸ್ಕ್ಯಾನಿಂಗ್ ಗೆ ರೂ.1,500 ದರ ನಿಗದಿ ಪಡಿಸಿದ್ದ ರಾಜ್ಯ ಸರ್ಕಾರ ಮತ್ತೊಂದು ಆದೇಶ ಹೊರಡಿಸಿದೆ.

ಹೌದು, ಸಿಟಿ ಸ್ಕ್ಯಾನ್ ಮಾಡಿಸುವ ರೋಗಿಗಳಿಗೆ ರಾಜ್ಯ ಸರ್ಕಾರ ಶಾಕ್ ನೀಡಿದ್ದು, ಹೆಚ್ ಆರ್ ಸಿ ಸ್ಕ್ಯಾನ್ ರೇಟ್ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

ನಿನ್ನೆ ಎಲ್ಲರಿಗೂ ಸಿಟಿ ಸ್ಕ್ಯಾನ್ ಗೆ 1,500 ರೂಪಾಯಿ ದರ ನಿಗದಿ ಮಾಡಿದ್ದ ಸರ್ಕಾರ ಇದೀಗ ಮತ್ತೊಂದು ಆದೇಶದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗಷ್ಟೇ 1,500 ರೂ ಎಂದು ಹೇಳಿದೆ. ಹಾಗೂ ಬಿಪಿಎಲ್ ಇಲ್ಲದವರಿಗೆ 2,500 ರೂ ನಿಗದಿ ಮಾಡಿ ಆರೋಗ್ಯ ಇಲಾಖೆ ಹೆಚ್ಚುವರಿ ಆಯುಕ್ತ ಜಾವೇದ್ ಅಕ್ತರ್ ಆದೇಶ ಹೊರಡಿಸಿದ್ದಾರೆ.

ಇನ್ನೂ. ರಾಜ್ಯದಲ್ಲಿ ಕೊರೊನಾ ಸೋಂಕು ಅಟ್ಟಹಾಸ ಮೆರೆಯುತ್ತಿದ್ದು, ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ರಾಜ್ಯಾಧ್ಯಂತ ಮೇ.10 ರಿಂದ ಮೇ.24ರವರೆಗೆ ಸಂಪೂರ್ಣ ಲಾಕ್ ಡೌನ್ ಅನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.

ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ನಿಯಂತ್ರಣಕ್ಕಾಗಿ ಮೊದಲು ನೈಟ್ ಕರ್ಪ್ಯೂ, ಆನಂತ್ರದ ವಾರಾಂತ್ಯ ಸಂಪೂರ್ಣ ಕರ್ಪ್ಯೂ ಬಳಿಕ, ಕೊರೋನಾ ಕರ್ಪ್ಯೂ ಜಾರಿಗೊಳಿಸಲಾಗಿತ್ತು. ಆದ್ರೇ.. ಕೊರೋನಾ ಮಾತ್ರ ಕಂಟ್ರೋಲ್ ಆಗಲೇ ಇಲ್ಲ. ದಿನವೊಂದಕ್ಕೆ ಅರ್ಧ ಲಕ್ಷ ಸಮೀಪದಷ್ಟು ಜನರಿಗೆ ಹೊಸದಾಗಿ ಕೊರೋನಾ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಡುತ್ತಿತ್ತು. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮೇ.10ರ ಬೆಳಿಗ್ಗೆ 6 ರಿಂದ ಮೇ.24ರ ಬೆಳಿಗ್ಗೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿದ್ದಾರೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ