ಬೆಂಗಳೂರು : ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ರಾಜ್ಯಾಧ್ಯಂತ ಮೇ.10 ರಿಂದ ಮೇ.24ರವರೆಗೆ ಸಂಪೂರ್ಣ ಲಾಕ್ ಡೌನ್ ಅನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ. ಪರಿಷ್ಕೃತ ಮಾರ್ಗಸೂಚಿಯಂತೆ ಮೇ.10ರ ಬೆಳಿಗ್ಗೆ 6 ಗಂಟೆಯಿಂದ ಮೇ.24ರ ಬೆಳಿಗ್ಗೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ.
ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ನಿಯಂತ್ರಣಕ್ಕಾಗಿ ಮೊದಲು ನೈಟ್ ಕರ್ಪ್ಯೂ, ಆನಂತ್ರದ ವಾರಾಂತ್ಯ ಸಂಪೂರ್ಣ ಕರ್ಪ್ಯೂ ಬಳಿಕ, ಕೊರೋನಾ ಕರ್ಪ್ಯೂ ಜಾರಿಗೊಳಿಸಲಾಗಿತ್ತು. ಆದ್ರೇ.. ಕೊರೋನಾ ಮಾತ್ರ ಕಂಟ್ರೋಲ್ ಆಗಲೇ ಇಲ್ಲ. ದಿನವೊಂದಕ್ಕೆ ಅರ್ಧ ಲಕ್ಷ ಸಮೀಪದಷ್ಟು ಜನರಿಗೆ ಹೊಸದಾಗಿ ಕೊರೋನಾ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಡುತ್ತಿತ್ತು. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮೇ.10ರ ಬೆಳಿಗ್ಗೆ 6 ರಿಂದ ಮೇ.24ರ ಬೆಳಿಗ್ಗೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿದ್ದಾರೆ.
ನಾಳೆ ಬೆಳಗ್ಗೆ 6 ಗಂಟೆಯಿಂದಲೇ ಬೆಂಗಳೂರು ಸೇರಿ ಇಡಿ ಕರ್ನಾಟಕ ರಾಜ್ಯ ಲಾಕ್ ಡೌನ್ ಆಗಲಿದದು, ಹಿಂದೆಂದಿಗಿಂತಲೂ ಈ ಬಾರಿ ಸ್ಟ್ರಿಕ್ಟ್ ರೂಲ್ಸ್ ಜಾರಿ ಮಾಡಲು ರಾಜ್ಯ ಸರ್ಕಾರ ಸಜ್ಜಾಗಿದೆ. ಯಾರಾದ್ರೂ ಅನಗತ್ಯವಾಗಿ ಹೊರಬಂದ್ರೆ ದಂಡದ ಜೊತೆಗೆ ಪ್ರಕರಣ ದಾಖಲಾಗಲಿದೆ.
ನಾಳೆ ಬೆಳಗ್ಗೆ 10 ಗಂಟೆಯವರೆಗೆ ಹಾಲು, ಹಣ್ಣು, ತರಕಾರಿ, ದಿನಸಿ ಖರೀದಿ ಮಾಡಲು ಅವಕಾಶ ನೀಡಲಾಗಿದೆ. ಈ ಅವಧಿಯಲ್ಲಿ ಮಾತ್ರ ಅಗತ್ಯ ವಸ್ತುಗಳನ್ನು ಖರೀದಿ ಮಾಡಬಹುದು. ಆದರೆ ಬೆಳಗ್ಗೆ 10 ಗಂಟೆ ಮೇಲೆ ಅನಗತ್ಯವಾಗಿ ಹೊರಗೆ ಬಂದ್ರೆ ದಂಡ ಜೊತೆಗೆ ಪ್ರಕರಣ ದಾಖಲಾಗಲಿದೆ.
Laxmi News 24×7