Breaking News

ಅಕ್ರಮ ಹಣ ವರ್ಗಾವಣೆ ಪ್ರಕರಣ ; ಹಲವೆಡೆ ಇಡಿ ದಾಳಿ

Spread the love

ಮುಂಬೈ/ಹೈದರಾಬಾದ್, ಜು.28-ಮುಂಬೈ ವಿಮಾನ ನಿಲ್ದಾಣಗಳ ನಿರ್ವಹಣೆ ವಿಚಾರದಲ್ಲಿ ನಡೆದಿದೆ ಎನ್ನಲಾದ 705 ಕೋಟಿ ರೂ. ಗಳ ಅವ್ಯವಹಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಹಲವಡೆ ದಾಳಿಗಳನ್ನು ನಡೆಸಿದೆ.

ಜಿವಿಕೆ ಗ್ರೂಪ್, ಮುಂಬೈ ಇಂಟರ್‍ನ್ಯಾಷನಲ್ ಏರ್ ಪೋರ್ಟ್ ಲಿಮಿಟೆಡ್ (ಎಂಐಎಎಲ್) ಮತ್ತು ಇತರ ಸಂಸ್ಥೆಗಳು ಈ ಅವ್ಯವಹಾರದಲ್ಲಿ ಶಾಮೀಲಾಗಿದ್ದು, ಇಂದು ಬೆಳಗ್ಗೆಯಿಂದ ವಾಣಿಜ್ಯ ರಾಜಧಾನಿ ಮುಂಬೈ ಮತ್ತು ಮುತ್ತಿನ ನಗರಿ ಹೈದರಾಬಾದ್‍ನ ವಿವಿಧೆಡೆ ಇಡಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿಗಳನ್ನು ನಡೆದಿ ಅಕ್ರಮಗಳನ್ನು ಪತ್ತೆ ಮಾಡಿದ್ದಾರೆಈ ಹಗರಣದಲ್ಲಿ ಜಿವಿಕೆ ಗ್ರೂಪ್‍ನ ವ್ಯವಸ್ಥಾಪಕ ನಿರ್ದೇಶರು, ಎಂಐಎಎಲ್‍ನ ಮುಖ್ಯಸ್ಥರು ಹಾಗೂ ಸರ್ಕಾರದ ಅಧಿಕಾರಿಗಳೂ ಶಾಮೀಲಾಗಿದ್ದು, ಇಡಿ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ತೀವ್ರಗೊಳಿಸಿದ್ದಾರೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣದ ಮಾಸ್ಟರ್​​ ಮೈಂಡ್ ದಕ್ಷಿಣಕನ್ನಡ ಮಾಜಿ ಡಿಸಿ ಸಸಿಕಾಂತ್ ಸೆಂಥಿಲ್ ಎಂದು ಜನಾರ್ದನ ರೆಡ್ಡಿ ಗಂಭೀರ ಆರೋಪ

Spread the love ಬೆಂಗಳೂರು/ದಕ್ಷಿಣ ಕನ್ನಡ: “ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತರದ ಹಿಂದಿನ ಮಾಸ್ಟರ್​ ಮೈಂಡ್​​ ತಮಿಳುನಾಡಿನ ತಿರುವಲ್ಲೂರಿನ ಕಾಂಗ್ರೆಸ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ