Breaking News

ಡಿಸಿ ನಿವಾಸದಲ್ಲಿ ಸ್ವಿಮ್ಮಿಂಗ್​ ಪೂಲ್​, ಜಿಮ್​! ರೋಹಿಣಿ ಸಿಂಧೂರಿ ವಿರುದ್ಧ ಜೆಡಿಎಸ್​ ಮುಖಂಡನ ಗಂಭೀರ ಆರೋಪ

Spread the love

ಮೈಸೂರು: ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸದಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡು ಸ್ವಿಮ್ಮಿಂಗ್​ ಪೂಲ್​ ಮತ್ತು ಜಿಮ್ ನಿರ್ಮಾಣ ಮಾಡಲಾಗಿದೆ ಎಂದು ಮೈಸೂರು ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ಜೆಡಿಎಸ್​ ಮುಖಂಡ ಕೆ.ವಿ. ಮಲ್ಲೇಶ್​ ಗಂಭೀರ ಆರೋಪ ಮಾಡಿದ್ದಾರೆ. ​

ಡಿಸಿ ಅಧಿಕೃತ ನಿವಾಸದಲ್ಲಿ ಸ್ವಿಮ್ಮಿಂಗ್ ಪೂಲ್ ಮತ್ತು ಜಿಮ್ ನಿರ್ಮಾಣ ಮಾಡಲಾಗಿದೆ. ಜಲದರ್ಶಿನಿ ಅತಿಥಿ ಗೃಹ ಪಾರಂಪರಿಕ ಕಟ್ಟಡಗಳ ವ್ಯಾಪ್ತಿಗೆ ಸೇರಿದೆ. ಕರೊನಾ ಸಂಕಷ್ಟ ಕಾಲದಲ್ಲಿ ಇಂತಹ ಮೋಜು ಮಸ್ತಿ ಏಕೆ ಬೇಕಿತ್ತು? ಸ್ಮಿಮ್ಮಿಂಗ್ ಪೂಲ್ ನಿರ್ಮಿಸಲು ಯಾವ ಅನುದಾನ ಖರ್ಚು ಮಾಡಿದ್ದೀರಿ ಬಹಿರಂಗಪಡಿಸಿ. ಇದಕ್ಕೆ ಸರ್ಕಾರದ ಅನುದಾನ ಬಳಸಿದ್ದೀರಾ? ಅಥವಾ ಬೇರೆ ಯಾರಾದ್ರೂ ಪ್ರಾಯೋಜಕರ ಸಹಾಯ ಪಡೆದಿದ್ದೀರಾ? ಎಂದು ಮಲ್ಲೇಶ್​ ಜರಿದಿದ್ದಾರೆ.

ಕರೊನಾ ಕಾಲದಲ್ಲಿ ದಿನದ 24 ಗಂಟೆ ಕಾಲ ಕೆಲಸ ಮಾಡುತ್ತೇನೆಂದು ಹೇಳ್ತೀರಿ. ಹಾಗಾದ್ರೆ ಇಂತಹ ಮೋಜು ಮಸ್ತಿಗೆ ಸಮಯ ಹೇಗೆ ಸಿಗುತ್ತೆ? ಜನ ಪರವಾಗಿ ಚಿಂತಿಸುವ ಡಿಸಿ ಇಂತಹ ಕೆಲಸ ಮಾಡ್ತಾರಾ? ನಿಮಗೆ ನಿಜಕ್ಕೂ ಜನಪರ ಕಾಳಜಿ ಇಲ್ಲ ಎಂದರು.

ನಾನು ಆರ್.ಟಿ.ಐ. ಮೂಲಕ ಮಾಹಿತಿ ಬಯಸುವೆ. ನೀವು ಈ ಕಾಮಗಾರಿಗೆ ಬಳಸಿದ ಅನುದಾನದ ಕುರಿತು ಮಾಹಿತಿ ಕೊಡಬೇಕು. ಜನರಿಗೆ ಒಳ್ಳೆಯದು ಮಾಡಲು ಆಗಲ್ಲ ಅಂದ್ರೆ ಮೈಸೂರಿನಿಂದ ನಿರ್ಗಮಿಸಿ. ಜನ ಯಾರೇ ಹೋಗಿ ಸಮಸ್ಯೆ ಹೇಳಿಕೊಂಡ್ರೂ ನಿಮ್ಮ ಬಳಿ ಸೂಕ್ತ ಸ್ಪಂದನೆ ಸಿಗುತ್ತಿಲ್ಲ. ಜನರ ಕೈಗೆ ನೀವು ಸಿಗಲ್ಲ‌ ಎಂದು ಆರೋಪ ಮಾಡಿದರು.

ಯಾರೇ ಪಾರಂಪರಿಕ ಕಟ್ಟಡ ಪಕ್ಕ ನಿರ್ಮಾಣ ಮಾಡಬೇಕಾದರೆ ಡಿಸಿ ಅನುಮತಿ ಕಡ್ಡಾಯ. ಆದರೆ, ಸ್ಮಿಮ್ಮಿಂಗ್ ಪೂಲ್ ವಿಚಾರದಲ್ಲಿ ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದೆ ಎಂದು ಸ್ಮಿಮ್ಮಿಂಗ್ ಪೂಲ್ ಚಿತ್ರಗಳನ್ನು ಪ್ರದರ್ಶಿಸಿ ಜೆಡಿಎಸ್ ಮುಖಂಡ ಕೆ.ವಿ. ಮಲ್ಲೇಶ್ ಗಂಭೀರ ಆರೋಪ ಮಾಡಿದ್ದಾರೆ.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ