ಹುಬ್ಬಳ್ಳಿ: ರಾಜ್ಯದಲ್ಲಿ ಇಂದಿನಿಂದ ಆರಂಭವಾಗಿರುವ ಲಾಕ್ ಡೌನ್ ಕಟ್ಟುನಿಟ್ಟಾಗಿ ಜಾರಿ ಮಾಡಲು ಪೊಲೀಸರು ನಸುಕಿನ ಜಾವದಿಂದಲೇ ಕಾರ್ಯಾಚರಣೆಗೆ ಇಳಿದಿದ್ದಾರೆ. ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ 20ಕ್ಕೂ ಹೆಚ್ಚು ವಾಹನಗಳನ್ನ ಸೀಜ್ ಮಾಡಿ ಅನಗತ್ಯವಾಗಿ ಹೊರಗೆ ಬರೋರಿಗೆ ಬಿಸಿ ಮುಟ್ಟಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ವಿವಿಧ ಸರ್ಕಲ್ ಗಳಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ ಪರಿಶೀಲನೆ ನಡೆಸುತ್ತಿದ್ದು ಅನಗತ್ಯವಾಗಿ ಓಡಾಡುವ ವಾಹನಗಳನ್ನ ಸೀಜ್ ಮಾಡುತ್ತಿದ್ದಾರೆ.
ಹುಬ್ಬಳ್ಳಿಯ ಚೆನ್ನಮ್ಮ ಸರ್ಕಲ್ ನಲ್ಲಿ ನಸುಕಿನ ಜಾವದಿಂದಲೇ ಪೊಲೀಸರು ಬೈಕ್ ಗಳನ್ನು ಜಪ್ತಿ ಮಾಡುತ್ತಿದ್ದು ಬೆಳಗ್ಗಿನ ಜಾವ 7ಗಂಟೆಯೊಳಗೆ 20ಕ್ಕೂ ಹೆಚ್ಚು ಬೈಕ್ ಗಳನ್ನ ಸೀಜ್ ಮಾಡಿ ಕೇಸ್ ದಾಖಲಿಸಿದ್ದಾರೆ.
ಹುಬ್ಬಳ್ಳಿ ಧಾರವಾಡದಲ್ಲಿ ಪ್ರತಿನಿತ್ಯ ಕೇಸ್ ಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಲಾಕ್ ಡೌನ್ ಅನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವ ಮೂಲಕ ಜಿಲ್ಲಾಡಳಿತ ಕೊರೊನಾಕ್ಕೆ ಕಡಿವಾಣ ಹಾಕಲು ಮುಂದಾಗಿದ್ದಾರೆ.