ಗದಗ: ರಾಜ್ಯದಲ್ಲಿ ಮತ್ತೆ ಆಕ್ಸಿಜನ್, ವೆಂಟಿಲೇಟರ್ ಗಾಗಿ ಹಾಹಾಕಾರ ಆರಂಭವಾಗಿದೆ. ವೆಂಟಿಲೇಟರ್ ಬೆಡ್ ಇಲ್ಲದೇ ಮೂವರು ಕೊರೊನಾ ಸೋಂಕಿತರು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ಆಸ್ಪತ್ರೆಯಲ್ಲಿ ನಡೆದಿದೆ.
ನಿನ್ನೆ ರಾತ್ರಿಯಿಂದ ಇಂದು ಬೆಳಗಿನವರೆಗೆ ಮೂವರು ರೋಗಿಗಳು ಸಾವನ್ನಪ್ಪಿದ್ದಾರೆ. ಮುಂಡರಗಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಇಲ್ಲದೇ ಸೋಂಕಿತರು ಪರದಾಡುತ್ತಿದ್ದು, ನಿನ್ನೆ ರಾತ್ರಿ 55 ವರ್ಷದ ಮಹಿಳೆ ಮೃತಪಟ್ಟಿದ್ದರೆ, ಇಂದು ಬೆಳಿಗ್ಗೆ ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. ಈ ನಡುವೆ ಆಸ್ಪತ್ರೆಯಲ್ಲಿ ಇನ್ನಿಬ್ಬರು ಸೋಂಕಿತರು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.
ಆಸ್ಪತ್ರೆಯ ವೈದ್ಯರು, ಜಿಲ್ಲಾಧಿಕಾರಿಗಳು ವೆಂಟಿಲೇಟರ್ ಬೆಡ್ ವ್ಯವಸ್ಥೆ ಮಾಡಿಕೊಡುವಂತೆ ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಯಾರೊಬ್ಬರೂ ಇತ್ತ ಗಮನಹರಿಸುತ್ತಿಲ್ಲ ಎಂದು ಸೋಂಕಿತರ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ
Laxmi News 24×7