Breaking News

ಪೆಟ್ರೋಲ್ ಬೆಲೆ ಲೀಟರ್ ಗೆ 100.20 ರೂಪಾಯಿಗೆ ಏರಿಕೆ

Spread the love

ದೆಹಲಿ:ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸೋಮವಾರವೂ(ಮೇ 10) ಹೆಚ್ಚಳವಾಗಿದ್ದು, ಮಹಾರಾಷ್ಟ್ರದಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ ನೂರು ರೂಪಾಯಿ ದಾಟಿರುವುದಾಗಿ ವರದಿ ತಿಳಿಸಿದೆ.

ಕಳೆದ ಒಂದು ವಾರದಲ್ಲಿ ತೈಲ ಬೆಲೆ ಐದು ಬಾರಿ ಏರಿಕೆಯಾಗಿದ್ದು, ಮಹಾರಾಷ್ಟ್ರದ ಪರ್ಭಾನಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 100.20 ರೂಪಾಯಿಗೆ ಏರಿಕೆಯಾಗಿದೆ. ಭೋಪಾಲ್ ನಲ್ಲಿ ಪೆಟ್ರೋಲ್ ಬೆಲೆ 99.55 ರೂಪಾಯಿಗೆ ಹೆಚ್ಚಳವಾಗಿದೆ ಎಂದು ವರದಿ ತಿಳಿಸಿದೆ.

ರಾಜಸ್ಥಾನದ ಗಂಗಾನಗರ್ ಜಿಲ್ಲೆಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 102.42 ರೂಪಾಯಿ, ಮಧ್ಯಪ್ರದೇಶದ ಅನುಪ್ಪುರ್ ನಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 102.12ರೂಪಾಯಿಗೆ ಏರಿಕೆಯಾಗಿದೆ.

ರಾಷ್ಟ್ರರಾಜಧಾನಿ ಪೆಟ್ರೋಲ್ ಬೆಲೆ ಲೀಟರ್ ಗೆ 26ಪೈಸೆ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 33 ಪೈಸೆ ಏರಿಕೆಯಾಗಿದೆ ಎಂದು ರಾಜ್ಯ ಸ್ವಾಮಿತ್ವದ ತೈಲ ಮಾರಾಟಗಾರರು ಬಿಡುಗಡೆಗೊಳಿಸಿರುವ ದರಪಟ್ಟಿಯಲ್ಲಿ ನಿಗದಿಪಡಿಸಲಾಗಿದೆ ಎಂದು ವರದಿ ಹೇಳಿದೆ.

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 91.53 ಹಾಗೂ ಡೀಸೆಲ್ ಬೆಲೆ 82.06 ರೂಪಾಯಿಗೆ ಏರಿಕೆಯಾಗಿದೆ. ಮುಂಬಯಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 97.86 ರೂಪಾಯಿ, ಡೀಸೆಲ್ ಬೆಲೆ 89.17 ರೂಪಾಯಿಗೆ ಹೆಚ್ಚಳವಾಗಿದೆ.

ಚೆನ್ನೈಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 93.38 ರೂಪಾಯಿ, ಡೀಸೆಲ್ ಬೆಲೆ ಲೀಟರ್ ಗೆ 86.96 ರೂಪಾಯಿ, ಕೋಲ್ಕತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 91.66 ರೂಪಾಯಿ, ಡೀಸೆಲ್ ಬೆಲೆ ಲೀಟರ್ ಗೆ 84.90 ರೂಪಾಯಿಗೆ ಹೆಚ್ಚಳವಾಗಿದೆ.


Spread the love

About Laxminews 24x7

Check Also

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಚಿವ ರಾಮಲಿಂಗಾರೆಡ್ಡಿ ಭೇಟಿ: ಅಭಿವೃದ್ಧಿ ಯೋಜನೆಗಳ ಅವಲೋಕನ

Spread the love ಸುಬ್ರಹ್ಮಣ್ಯ, ದಕ್ಷಿಣ ಕನ್ನಡ: ಇಲ್ಲಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ