Home / ಜಿಲ್ಲೆ / ಬೆಂಗಳೂರು / ಪ್ಲೀಸ್ ಲಸಿಕೆ ಕೊಡಿ- ಆಸ್ಪತ್ರೆ ಮುಂದೆ ಸಾಲು ನಿಂತ 800ಕ್ಕೂ ಹೆಚ್ಚು ಜನ

ಪ್ಲೀಸ್ ಲಸಿಕೆ ಕೊಡಿ- ಆಸ್ಪತ್ರೆ ಮುಂದೆ ಸಾಲು ನಿಂತ 800ಕ್ಕೂ ಹೆಚ್ಚು ಜನ

Spread the love

ಬೆಂಗಳೂರು: ನಗರ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಲಸಿಕೆ ಹಾಕಿಸಲು ತುದಿಗಾಲಿನಲ್ಲಿ ನಿಂತಿದ್ದಾರೆ.

ಇಂದಿನಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಸಿಗಲಿದೆ ಎಂದು ಪ್ರಕಟಿಸಿದ ಬೆನ್ನಲ್ಲೇ ಒಂದೇ ಬಾರಿಗೆ 800ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ಲಗ್ಗೆ ಇಟ್ಟಿದ್ದಾರೆ.

ಕೆಲವರು ಆನ್‍ಲೈನ್ ಮೂಲಕ ನೋಂದಣಿ ಮಾಡಿದ್ದರೆ ಇನ್ನು ಕೆಲವರು ಎರಡನೇ ಡೋಸ್ ಪಡೆಯಲು ಆಸ್ಪತ್ರೆಗೆ ಸೇರಿದ್ದರು. ಬೆಳಗ್ಗಯಿಂದಲೂ ಜನ ಲಸಿಕೆ ಹಾಕಿಸಿಕೊಳ್ಳಲು ಸರದಿಯಲ್ಲಿ ನಿಂತಿದ್ದರು. ಈ ಸಾಲಿನಲ್ಲಿ  45 ವರ್ಷ ಮೇಲ್ಪಟ್ಟವರು 60 ವರ್ಷ ಮೇಲ್ಪಟ್ಟವರು ಇದ್ದರು.

ಭಾರತದಲ್ಲಿ ಹಂತ ಹಂತವಾಗಿ ವಿತರಣೆ ಆರಂಭಿಸಿದ್ದರೂ ಲಸಿಕೆಗಳ ಬಗ್ಗೆ ಅಪಪ್ರಚಾರ ಮಾಡಿದ್ದರಿಂದ ಜನ ಹಿಂದೇಟು ಹಾಕಿದ್ದರು. ಆರಂಭದ ದಿನಗಳಲ್ಲಿ  ಲಸಿಕೆ ವಿತರಣೆಯ ಟಾರ್ಗೆಟ್ ಪೂರ್ಣಗೊಳಿಸಲು ಬಿಬಿಎಂಪಿ ಹರಸಾಹಸಪಟ್ಟಿತ್ತು.

ಜನರಿಂದ ನೀರಸ ಪ್ರತಿಕಿಯೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಏ.11 ರಿಂದ 14 ರವರೆಗೆ ದೇಶಾದ್ಯಂತ ಲಸಿಕೆ ಉತ್ಸವ ಆಯೋಜಿಸಲಾಗಿತ್ತು. ಆದರೆ ಎರಡನೇ ಅಲೆ ಸುನಾಮಿಯಂತೆ ಮುನ್ನುಗ್ಗುತ್ತಿರುವ ಹಿನ್ನೆಲೆಯಲ್ಲಿ ಜನ ಈಗ ಲಸಿಕೆ ಹಾಕಿಸಿಕೊಳ್ಳಲು ತುದಿಗಾಲಿನಲ್ಲಿ ನಿಂತಿದ್ದಾರೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ