Breaking News

ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನೇಷನ್ 14 ದಿನ ಮುಂದೂಡಿಕೆ?

Spread the love

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಲಸಿಕೆ ಪಡೆಯುವ ನಿರೀಕ್ಷೆಯಲ್ಲಿದ್ದ 18 ವರ್ಷ ಮೇಲ್ಪಟ್ಟವರಿಗೆ ಬಿಗ್ ಶಾಕ್ ಎದುರಾಗಿದ್ದು, ರಾಜ್ಯದಲ್ಲಿ ಮೇ. 10 ರಿಂದ 24 ರವರೆಗೆ ಕಠಿಣ ಲಾಕ್ ಡೌನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗಳಿಗೆ ಲಸಿಕೆ ಪಡೆಯಲು ಬರಲು ಸಮಸ್ಯೆ ಅಗುತ್ತದೆ ಹೀಗಾಗಿ 14 ದಿನ ಮುಂದೂಡುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್ ಅವರು, ಬೆಂಗಳುರು ಸೇರಿದಂತೆ ರಾಜ್ಯದಲ್ಲಿ ಲಸಿಕೆ ಕೊರತೆ ಇಲ್ಲ. ರಾಜ್ಯಕ್ಕೆ 5 ಲಕ್ಷ ಡೋಸ್ ಬಂದಿದೆ. ಯುವಕರಿಗೆ ನೀಡಲು ಯಾವುದೇ ಸಮಸ್ಯೆ ಇಲ್ಲ,ಇಂದಿನಿಂದ ಹಲವು ನಿರ್ಬಂಧಗಳಿವೆ ಹೀಗಾಗಿ ಸಮಸ್ಯೆ ಎದುರಾಗಿದ್ದು, ಆಸ್ಪತ್ರೆಗಳಿಗೆ ಲಸಿಕೆ ಪಡೆಯಲು ಬರಲು ಸಮಸ್ಯೆ ಆಗುತ್ತೆ. ಹೀಗಾಗಿ 14 ದಿನ ಮುಂದೂಡುವ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಜೊತೆ ಚರ್ಚೆ ನಡೆಸಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮೇ. 10 ರ ಇಂದಿನಿಂದ ಮೇ. 24 ರವರೆಗೆ ಬೆಂಗಳೂರು ಸೇರಿ ರಾಜ್ಯಾದ್ಯಂತ ಕಠಿಣ ಲಾಕ್ ಡೌನ್ ಜಾರಿಗೊಳಿಸಲಾಗಿದೆ.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ