Breaking News

ಸರಿಗಮಪ ಶೋ ಮೂಲಕ ಫೇಮಸ್ ಆಗಿದ್ದ ಪೊಲೀಸ್ ಕಾನ್ಸ್‌ಟೇಬಲ್ ಸುಬ್ರಮಣಿ ಪತ್ನಿ ಕೊರೊನಾ ಸೋಂಕಿಗೆ ಬಲಿ

Spread the love

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಜನಪ್ರಿಯ ಕಾರ್ಯಕ್ರಮ ಸರಿಗಮಪ ಶೋ ಮೂಲಕ ಫೇಮಸ್ ಆಗಿದ್ದ ಪೊಲೀಸ್ ಕಾನ್ಸ್‌ಟೇಬಲ್ ಸುಬ್ರಮಣಿ ಪತ್ನಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಕಳೆದ ಒಂದು ವಾರದ ಹಿಂದೆ ಸುಬ್ರಮಣಿ ಪತ್ನಿಯವರಿಗೆ ಕೊರೊನಾ ಧೃಡಪಟ್ಟಿದ್ದು, ಎರಡು ದಿನದ ಹಿಂದೆ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಪತ್ನಿಗೆ ಚಿಕಿತ್ಸೆ ಕೊಡಿಸಲು ಸುಬ್ರಮಣಿ ಬೆಂಗಳೂರಿನಲ್ಲಿ ಆಸ್ಪತ್ರೆಗಳನ್ನು ಸುತ್ತಾಡಿದ್ದರು. ಆದ್ರೆ ಬೆಂಗಳೂರಿನ ಯಾವುದೇ ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಬೆಡ್ ಸಿಕ್ಕಿರಲಿಲ್ಲ.

ಕೊನೆಗೆ ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಾಕಾರಿಯಾಗದೇ ಸುಬ್ರಮಣಿ ಪತ್ನಿ ಕೊನೆಯುಸಿರೆಳೆದಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ