Breaking News

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಮತ್ತೊಂದು ಸಿಹಿಸುದ್ದಿ : ಪಂಚಾಯಿತಿಗಳಿಗೆ 475 ಕೋಟಿ ರೂ. ನೆರವು

Spread the love

ನವದೆಹಲಿ : ಕೇಂದ್ರ ಸರ್ಕಾರವು ರಾಜ್ಯಕ್ಕೆ ಮತ್ತೊಂದು ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕೊರೊನಾ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರ 25 ರಾಜ್ಯಗಳಿಗೆ 8,923 ಕೋಟಿ ರೂ. ನೆರವು ಬಿಡುಗಡೆ ಮಾಡಿದೆ. ಅದರಲ್ಲಿ ಕರ್ನಾಟಕಕ್ಕೆ 475 ಕೋಟಿ ರೂ. ಲಭಿಸಿದೆ.

ಗ್ರಾಮ, ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿನ ಪಂಚಾಯತ್ ರಾಜ್ ಸಂಸ್ಥೆಗಳಿಗೆ ಅನುದಾನ ಹಂಚಿಕೆ ಆಗಲಿದೆ. ಗ್ರಾಮೀಣಾ ಭಾಗದ ಸ್ಥಳೀಯ ಸಂಸ್ಥೆಗಳು ಕೊರೊನಾ ಸಾಂಕ್ರಮಿಕ ನಿಯಂತ್ರಣಕ್ಕೆ ಅಗತ್ಯವಿರುವ ಕ್ರಮ ಕೈಗೊಳ್ಳಲು ಅನುದಾನ ಬಳಕೆ ಮಾಡಿಕೊಳ್ಳಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

15ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ಸ್ಥಳೀಯ ಸಂಸ್ಥೆಗಳಿಗೆ ಮೊದಲ ಕಂತಿನ ಅನುದಾನ ಜೂನ್ ನಲ್ಲಿ ಬಿಡುಗಡೆ ಆಗಬೇಕಿತ್ತು. ಆದರೆ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುಂಚಿತವಾಗಿಯೇ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.


Spread the love

About Laxminews 24x7

Check Also

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು : ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:*ಮುಖ್ಯಮಂತ್ರಿ ಸಿದ್ದರಾಮಯ್ಯ*

Spread the love ಬೆಂಗಳೂರು, ಜನವರಿ 17: ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ