Home / Uncategorized / ವಾಹನ ಬಳಕೆ ನಿರ್ಬಂಧ: ಪೊಲೀಸರ ದಬ್ಬಾಳಿಕೆ: ದಲಿತ ಸಂಘರ್ಷ ಸಮಿತಿ ಆರೋಪ

ವಾಹನ ಬಳಕೆ ನಿರ್ಬಂಧ: ಪೊಲೀಸರ ದಬ್ಬಾಳಿಕೆ: ದಲಿತ ಸಂಘರ್ಷ ಸಮಿತಿ ಆರೋಪ

Spread the love

ಬೆಂಗಳೂರು: ಕೋವಿಡ್ ಲಾಕ್‌ಡೌನ್ ನೆಪದಲ್ಲಿ ನಾಗರಿಕರ ವಾಹನ ಬಳಕೆಗೆ ಪೊಲೀಸರು ನಿರ್ಬಂಧಿಸುತ್ತಿದ್ದು, ನಾಗರಿಕರ ಮೇಲೆ ಪೊಲೀಸರು ನಡೆಸುತ್ತಿರುವ ದಬ್ಬಾಳಿಕೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಲಕ್ಷ್ಮೀನಾರಾಯಣ ನಾಗವಾರ ಆರೋಪಿಸಿದ್ದಾರೆ.

ವಾಹನ ಬಳಸದೆ ನಡೆದುಕೊಂಡೇ ಅಗತ್ಯ ವಸ್ತುಗಳ ಖರೀದಿಗೆ ಹೋಗುವುದು ಹೇಗೆ ಎಂದು ಅವರು ಪ್ರಶ್ನಿಸಿದ್ದಾರೆ. ಕೃಷಿ ಚಟುವಟಿಕೆ ಅವಕಾಶ ಇದ್ದರೂ, ಜಮೀನಿಗೆ ತೆರಳಲು ರೈತರು ಪರದಾಡಬೇಕಾಗಿದೆ. ಕೃಷಿ ಇಲಾಖೆಯಿಂದ ಪಾಸ್ ಪಡೆದುಕೊಂಡಿದ್ದರೂ ವಾಹನದಲ್ಲಿ ಹೋಗಲು ಅವಕಾಶ ನೀಡುತ್ತಿಲ್ಲ ಎಂದು ದೂರಿದ್ದಾರೆ.

‘ನಾನೂ ಕೃಷಿಕನಾಗಿದ್ದು, 60 ಕಿಲೋ ಮೀಟರ್ ದೂರದಲ್ಲಿರುವ ಜಮೀನಿಗೆ ತೆರಳಲು ಅವಕಾಶ ನೀಡುತ್ತಿಲ್ಲ. ಪಾಸ್ ಇದ್ದರೂ ವಾಹನ ಜಪ್ತಿ ಮಾಡುವ ಬೆದರಿಕೆಯನ್ನು ಪೊಲೀಸರು ಹಾಕುತ್ತಿದ್ದಾರೆ. ವಾಹನ ಬಳಕೆಗೆ ಅವಕಾಶ ನೀಡಿ ಸರ್ಕಾರ ಕೂಡಲೇ ಸುತ್ತೋಲೆ ಹೊರಡಿಸಬೇಕು’ ಎಂದು ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಮತದಾನಕ್ಕೆ ಮೂರೇ ದಿನ ಬಾಕಿ: ಬೆಂಗಳೂರಿನಲ್ಲಿ ನಾಳೆ ಸಂಜೆಯಿಂದ ನಿಷೇಧಾಜ್ಞೆ

Spread the loveಲೋಕಸಭಾ ಚುನಾವಣೆ ಮತದಾನಕ್ಕೆ ಮೂರೇ ದಿನ ಬಾಕಿ: ಬೆಂಗಳೂರಿನಲ್ಲಿ ನಾಳೆ ಸಂಜೆಯಿಂದ ನಿಷೇಧಾಜ್ಞೆ ಜಾರಿ ಬೆಂಗಳೂರು: ಲೋಕಸಭಾ ಚುನಾವಣೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ