Breaking News

ಕೊರೋನಾಗೆ ಬಲಿಯಾದ ನಿವೃತ್ತ ಹಿರಿಯ ಐಪಿಎಸ್ ಅಧಿಕಾರಿ ಕೆ.ವಿ.ಆರ್.ಠಾಗೂರ್

Spread the love

ಬೆಂಗಳೂರು,ಮೇ.12- ದಕ್ಷತೆಗೆ ಹಾಗೂ ಪ್ರಾಮಾಣಿಕತೆಗೆ ಹೆಸರಾಗಿದ್ದ ನಿವೃತ್ತ ಹಿರಿಯ ಐಪಿಎಸ್ ಅಧಿಕಾರಿ ಕೆ.ವಿ.ಆರ್.ಠಾಗೂರ್(70) ಅವರು ಕೊರೊನಾಗೆ ಬಲಿಯಾಗಿದ್ದಾರೆ.

ದಿ. ಮಾಜಿ ವಿಧಾನ ಪರಿಷತ್ ಸದಸ್ಯ ವೀರಣ್ಣ ಗೌಡ ಅವರ ಪುತ್ರರಾದ ಕೆ.ವಿ.ಆರ್. ಠಾಗೂರ್ ಅವರು ಸದಾ ಹಸನ್ಮುಖಿಯಾಗಿ, ಉತ್ಸಾಹದಿಂದಲೇ ಎಲ್ಲರನ್ನು ಬೆನ್ನುತಟ್ಟಿ ಬೆಳೆಸುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ವಿಧಿವಶರಾಗಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.

ಸರಳ,ಸಜ್ಜನ ಅಧಿಕಾರಿಯೆಂದೇ ಗುರುತಿಸಿ ಕೊಂಡಿದ್ದ ಠಾಗೂರರು ಸಾಹಿತ್ಯ ಕ್ಷೇತ್ರದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದರು. ಮೂಲತಃ ಶೃಂಗೇರಿ ಮೂಲದವರಾದ ಆವರು 09-01-1949 ರಂದು ಜನಿಸಿದರು. 09-09-1974 ರಲ್ಲಿ ಪೊಲೀಸ್ ಇಲಾಖೆಗೆ ಸೇರಿ 2009 ರಲ್ಲಿ ಡಿಜಿಪಿಯಾಗಿ ನಿವೃತ್ತಿಯಾಗಿದ್ದರು.

ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನುತ ಹುದ್ದೆಗಳನ್ನು ಆಲಂಕರಿಸಿ ಇತರರಿಗೆ ಮಾದರಿಯಾಗುವಂತೆ ಸೇವೆ ಸಲ್ಲಿಸಿದ್ದರು. ಮಾಧ್ಯಮ ಸ್ನೇಹಿಯಾಗಿದ್ದ ಅವರು ವಾರ್ತಾ ಇಲಾಖೆ ಆಯುಕ್ತರಾಗಿ ಪತ್ರಕರ್ತರ ಕಷ್ಟ ಸುಖಗಳಿಗೆ ಸ್ಪಂದಿಸಿದ್ದರು.

ರಾಷ್ಟ್ರಕವಿ ಕುವೆಂಪು ಅವರ ನಿಕಟಸಂಪರ್ಕ ಹೊಂದಿದ್ದ ಠಾಗೂರರು ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು. ನಿವೃತ್ತಿ ಜೀವನದಲ್ಲಿ ಹಲವಾರು ಶಿಕ್ಷಣ ಸಂಸ್ಥೆಗಳಲ್ಲಿ ಉಪನ್ಯಾಸ ನೀಡುತ್ತಾ ಯುವ ಸಮುದಾಯಕ್ಕೆ ಮಾದರಿಯಾಗಿದ್ದರು.

ಕೆಎಸ್‍ಪಿಸಿ ಪರೀಕ್ಷೆ ಬರೆದು ಡಿವೈಎಸ್‍ಪಿಯಾಗಿ ಪೊಲೀಸ್ ಇಲಾಖೆ ಸೇರಿದ ಅವರು ಬೆಂಗಳೂರು ನಗರದಲ್ಲಿ ಅಪರಾಧ ವಿಭಾಗದ ಡಿಸಿಪಿಯಾಗಿ ಸೇವೆ ಸಲ್ಲಿಸಿದ್ದರು. ನಂತರ ಸಂಚಾರಿ ವಿಭಾಗದ ಹೆಚ್ಚುವರಿ ಆಯುಕ್ತರಾಗಿ ಪೊಲೀಸ್ ಇಲಾಖೆಯ ವಿವಿದ ವಿಭಾಗಗಳಲ್ಲಿ ಸೇವೆ ಸಲ್ಲಿಸಿದ್ದ ಶ್ರೀಯುತರು ಎಡಿಜಿಪಿ ಹುದ್ದೆಗೆ ಭಡ್ತಿ ಪಡೆದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸಿ ನಂತರ ನಿವೃತ್ತಿಯಾಗಿದ್ದರು.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ