Breaking News

ಸಿಇಟಿ ಪರೀಕ್ಷೆ ಮುಂದೂಡಿಕೆ: ದಿನಾಂಕ ಮರು ನಿಗದಿ ಮಾಡಲಾಗಿದೆ.

Spread the love

ಬೆಂಗಳೂರು: ಕೋವಿಡ್ 19 ಸೋಂಕು ಹೆಚ್ಚಳವಾಗುತ್ತಿರುವ ಕಾರಣ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ಮುಂದೂಡಿಕೆ ಮಾಡಿರುವ ಹಿನ್ನೆಲೆಯಲ್ಲಿ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಪರೀಕ್ಷೆಯನ್ನು ಮುಂದೂಡಿ, ದಿನಾಂಕವನ್ನು ಮರು ನಿಗದಿ ಮಾಡಲಾಗಿದೆ.

ಈ ಹಿಂದೆ ಸಿಇಟಿ ಪರೀಕ್ಷೆಯನ್ನು ಜುಲೈ 7 ಮತ್ತು 8ರಂದು ನಡೆಸಲು ತೀರ್ಮಾನಿಸಲಾಗಿದೆ. ಇದೀಗ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ಮುಂದೂಡಿಕೆಯಾದ ಕಾರಣ ಸಿಇಟಿ ಪರೀಕ್ಷೆಯನ್ನು ಮುಂದೂಡಿ, ಆಗಸ್ಟ್ 28 ಮತ್ತು 29ರಂದು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತೀರ್ಮಾನಿಸಿದೆ.

ಪರಿಷ್ಕ್ರತ ಪಟ್ಟಿಯಂತೆ ಆಗಸ್ಟ್ 28ರಂದು ಬೆಳಗ್ಗೆ (10.30ರಿಂದ 11.15ರವರೆಗೆ) ಜೀವಶಾಸ್ತ್ರ, ಮಧ್ಯಾಹ್ನ (2.30ರಿಂದ 3.50ರವರೆಗೆ) ಗಣಿತ ಪರೀಕ್ಷೆ ನಡೆಯಲಿದೆ.

ಆಗಸ್ಟ್ 29ರಂದು ಬೆಳಗ್ಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ ರಸಾಯನ ಶಾಸ್ತ್ರ ಪರೀಕ್ಷೆಗಳು ನಡಡೆಯಲಿದೆ.

ಇದೇ ವೇಳೆ ಜುಲೈ 9ರಂದು ನಡೆಯಬೇಕಿದ್ದ ಕನ್ನಡ ಭಾಷಾ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದ್ದು, ಆ ಪರೀಕ್ಷೆಯು ಆಗಸ್ಟ್ 30 ರಂದು ನಡೆಯಲಿದೆ. (11.30 ರಿಂದ 12.30)


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ