Breaking News

ಕೊರೊನಾ ಸೋಂಕು ವರದಿ ನೆಗೆಟಿವ್‌ ಬರುತ್ತಿದ್ದಂತೆ ಮಕ್ಕಳನ್ನು, ಕುಟುಂಬದವರನ್ನು ಭೇಟಿಯಾದ ಅಲ್ಲು ಅರ್ಜುನ್‌..!

Spread the love

ನವದೆಹಲಿ: ಕೊರೊನಾ ಸೋಂಕು ದೃಢಪಟ್ಟು ಕ್ವಾರಂಟೈನ್‌ನಲ್ಲಿದ್ದ ಟಾಲಿವುಡ್‌ ನಟ ಅಲ್ಲು ಅರ್ಜುನ್‌‌ ಅವರ ವರದಿ ನೆಗೆಟಿವ್‌ ಬರುತ್ತಿದ್ದಂತೆ ತಮ್ಮ ಮಕ್ಕಳನ್ನು ಮುದ್ದಾಡಿದ್ದಾರೆ. ಟಾಲಿವುಡ್ ನಟ ಅಲ್ಲು ಅರ್ಜುನ್ ಅವರು ಕಳೆದ 14 ದಿನಗಳ ಹಿಂದೆ ಕೊರೊನಾ ಸೋಂಕು ಹಿನ್ನೆಲೆ ಕ್ವಾರಂಟೈನ್‌ ಆಗಿದ್ದು, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು.

ಇದೀಗ ಅವರು ಸೋಂಕಿನಿಂದ ಗುಣಮುಖರಾಗಿದ್ದು, ಅವರ ಪರೀಕ್ಷಾ ವರದಿಯಲ್ಲಿ ನೆಗೆಟಿವ್‌ ಬಂದಿದೆ. 15 ದಿನಗಳ ಬಳಿಕ ಅವರು ತಮ್ಮ ಮಕ್ಕಳನ್ನು ಹಾಗೂ ಕುಟುಂಬದರನ್ನು ಭೇಟಿ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ಕೊರೊನಾ ನೆಗೆಟಿವ್‌ ವರದಿ ಬಂದಿದ್ದು, 15 ದಿನಗಳ ಬಳಿಕ ಕುಟುಂಬದವರನ್ನು ಭೇಟಿ ಮಾಡುತ್ತಿದ್ದೇನೆ. ಮಕ್ಕಳನ್ನು ತುಂಬಾ ಮಿಸ್‌ ಮಾಡಿಕೊಂಡಿದ್ದೇನೆ” ಎಂದಿದ್ದು, ಮಕ್ಕಳನ್ನು ಮುದ್ದಾಡುತ್ತಿರುವ ವಿಡಿಯೋವನ್ನು ಪೋಸ್ಟ್‌ ಮಾಡಿದ್ದಾರೆ. 15 ದಿನಗಳ ಬಳಿಕ ತಂದೆಯನ್ನು ಕಂಡ ಮಗ ಹಾಗೂ ಮಗಳು ಅಪ್ಪಿಕೊಂಡು ಮುದ್ದಾಡಿದ್ದಾರೆ. ಅಲ್ಲು ಅರ್ಜುನ್‌ ಕೂಡಾ ಮಕ್ಕಳನ್ನು ಕಂಡು ಸಂತೋಷಗೊಂಡಿದ್ದಾರೆ.

 


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ