Breaking News

ಗ್ರಾಹಕರಿಗೆ ಶುಭ ಸುದ್ದಿ ನೀಡಿದ ಟಾಟಾ ಮೋಟಾರ್ಸ್ !

Spread the love

ಮುಂಬೈ: ದೇಶದಲ್ಲಿ ಕರೋನಾ ಮಹಾಮಾರಿಯು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಹಲವಾರು ರಾಜ್ಯಗಳು ಲಾಕ್‌ಡೌನ್‌ಗಳನ್ನು ವಿಧಿಸಿವೆ.

ಪ್ರಸ್ತುತ ಕೋವಿಡ್ -19 ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ದೇಶೀಯ ವಾಹನ ದೈತ್ಯ ಟಾಟಾ ಮೋಟಾರ್ಸ್ ತನ್ನ ಗ್ರಾಹಕರಿಗೆ ಶುಭ ಸುದ್ದಿಯೊಂದನ್ನು ನೀಡಿದೆ.

ಟಾಟಾ ಮೋಟಾರ್ಸ್ ಪ್ರಕಟಣೆಯ ಪ್ರಕಾರ, ಏಪ್ರಿಲ್ 31, 2021 ಮತ್ತು ಮೇ 31, 2021 ರ ಅವಧಿಯವರೆಗೆ ಮುಕ್ತಾಯಗೊಳ್ಳುವ ಕಾರುಗಳ ವಾರಂಟಿ ಮತ್ತು ಉಚಿತ ಸೇವಾ ಅವಧಿಯನ್ನು ಪರಿಷ್ಕೃತವಾಗಿ 2021 ರ ಜೂನ್ 30 ರವರೆಗೆ ವಿಸ್ತರಿಸಲಾಗಿದೆ. ಹಲವಾರು ವಾಹನ ಮಾಲೀಕರು COVID-19 ಸಂಬಂಧಿತ ಲಾಕ್‌ಡೌನ್‌ಗಳು ಮತ್ತು ಕರ್ಫ್ಯೂಗಳ ಕಾರಣದಿಂದಾಗಿ ನಿಗದಿತ ಅವಧಿಯಲ್ಲಿ ತಮ್ಮ ಕಾರುಗಳಿಗೆ ಈ ಸೇವೆಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಗ್ರಾಹಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಈ ಘೋಷಣೆ ಮಾಡಲಾಗಿದೆ ಎಂದು ಪಿವಿಬಿಯುನ ಟಾಟಾ ಮೋಟಾರ್ಸ್‌ನ (ದೇಶೀಯ ಮತ್ತು ಐಬಿ) ಮುಖ್ಯಸ್ಥ ಡಿಂಪಲ್ ಮೆಹ್ತಾ
ತಿಳಿಸಿದ್ದಾರೆ.

ನಾವು ನಮ್ಮ ಗ್ರಾಹಕರ ಸೇವೆಗೆ ಬದ್ಧರಾಗಿದ್ದೇವೆ
ಅವರ ವಾರಂಟಿ ಮತ್ತು ಉಚಿತ ಸೇವಾ ಅವಧಿಯನ್ನು 30 ಜೂನ್ 2021 ರವರೆಗೆ ವಿಸ್ತರಿಸುವ ಮೂಲಕ ಈ ಕಠಿಣ ಸಮಯಗಳಲ್ಲಿ ಅವರಿಗೆ ಹೆಚ್ಚಿನ ಬೆಂಬಲವನ್ನು ನೀಡುತ್ತಿದ್ದೇವೆ ಎಂದು ಹೇಳಿದರು.

ಟಾಟಾ ಮೋಟಾರ್ಸ್ ಪ್ರಸ್ತುತ ದೇಶಾದ್ಯಂತ 400 ಕ್ಕೂ ಹೆಚ್ಚು ಸ್ಥಳಗಳಲ್ಲಿ 608 ಸೇವಾ ಕೇಂದ್ರಗಳನ್ನು ಹೊಂದಿದೆ.


Spread the love

About Laxminews 24x7

Check Also

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Spread the loveಬೆಂಗಳೂರು: ಯಗಾದಿ  ಹಾಗೂ ರಂಜಾನ್  ಹಬ್ಬ ಒಟ್ಟಿಗೆ ಬಂದ ಹಿನ್ನೆಲೆ ಕೆಎಸ್‌ಆರ್‌ಟಿಸಿ  ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ