Breaking News

ಐಸಿಯುಗೆ ಸ್ಥಳಾಂತರಿಸಲು ಕೇಳಿಕೊಂಡ್ರು ಜನರಲ್​ ವಾರ್ಡ್​ನಲ್ಲೇ ಚಿಕಿತ್ಸೆ: ಯುವಕ ಸಾವು

Spread the love

ಚಿಕ್ಕಮಗಳೂರು: ಸರಿಯಾದ ಸಮಯಕ್ಕೆ ವೆಂಟಿಲೇಟರ್​ ಸಿಗದೇ ಯುವಕನೊಬ್ಬ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.

ಮೇಘರಾಜ್(31) ಮೃತ ಯುವಕ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮತ್ತಿಕಟ್ಟೆ ಗ್ರಾಮದ ನಿವಾಸಿ. ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಯ ಜನರಲ್ ವಾರ್ಡ್​ನಲ್ಲಿ ಯುವಕನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಆರೋಗ್ಯ ಪರಿಸ್ಥಿತಿ ಹದಗೆಟ್ಟಿದ್ದರಿಂದ ಐಸಿಯುಗೆ ಶಿಫ್ಟ್ ಮಾಡುವಂತೆ ಯುವಕ ಕೇಳಿಕೊಂಡಿದ್ದ.

ಆದರೆ, ಯುವಕನ ಮನವಿಯನ್ನು ಪುರಷ್ಕರಿಸಿದೇ ಕೊನೆಯ ಕ್ಷಣದವರೆಗೂ ಜನರಲ್ ವಾರ್ಡ್​ನಲ್ಲೇ ಯುವಕನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಸೂಕ್ತ ಚಿಕಿತ್ಸೆ ದೊರೆಯದೇ ಮಧ್ಯರಾತ್ರಿ ಕೊನೆಯುಸಿರೆಳೆದಿದ್ದಾರೆ. ಇದೀಗ ಮೃತನ ಕುಟುಂಬಸ್ಥರು ಆಸ್ಪತ್ರೆ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ