ಬೆಂಗಳೂರು: ಪವರ್‍ಸ್ಟಾರ್ ಪುನೀತ್ ರಾಜ್‍ಕುಮಾರ್ ಹಾಗೂ ಸಂತೋಷ್ ಆನಂದ್‍ರಾಮ್ ಕಾಂಬಿನೇಷನ್ ಸಿನಿಮಾ ‘ಯುವರತ್ನ’ ಈಗಾಗಲೇ ಬಿಡುಗಡೆಯಾಗಬೇಕಿತ್ತು. ಆದರೆ ಕೊರೊನಾ ವೈರಸ್ ಎಂಬ ಮಹಾಮಾರಿಯಿಂದಾಗಿ ಅನಿವಾರ್ಯವಾಗಿ ಮುಂದೂಡಲಾಗಿದೆ.
ಈ ಮಧ್ಯೆ ನಿರ್ದೇಶಕ ಸಂತೋಷ್ ಅವರು ಟ್ವೀಟ್ ಮಾಡಿ, ಅಭಿಮಾನಿಗಳ ಕೋರಿಕೆಗಾಗಿ “ಯುವರತ್ನ” ಪೋಸ್ಟರ್ ವರಮಹಾಲಕ್ಷ್ಮಿಗೆ ದೊಡ್ಮನೆ ಅಭಿಮಾನಿ ಬಳಗಕ್ಕೆ ಇದು ಸಮರ್ಪಣೆ ಎಂದು ಬರೆದುಕೊಂಡಿದ್ದಾರೆ.ಕೊರೊನಾ ಭೀತಿ ಎದುರಾಗದಿದ್ದಲ್ಲಿ ಏಪ್ರಿಲ್ 3ಕ್ಕೆ ಸಿನಿಮಾ ಬಿಡುಗಡೆಯಾಗುತ್ತಿತ್ತು. ಸಿನಿಮಾ ಬಿಡುಗಡೆ ಕುರಿತು ನಿರ್ದೇಶಕ ಸಂತೋಷ್ ಆನಂದರಾಮ್ ಅವರು ಈ ಹಿಂದೆ ಸ್ಪಷ್ಟನೆ ನೀಡಿದ್ದರು. ಬಹುನಿರೀಕ್ಷಿತ ಯುವರತ್ನ ಸಿನಿಮಾ ಮೇ 21ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ನಮ್ಮ ಪವರ್ ಸ್ಟಾರ್ ಸ್ವಾಗತಿಸಲು ಸಜ್ಜಾಗಿ ಎಂದು ಟ್ವೀಟ್ ಮಾಡಿದ್ದರು.
ಆದರೆ ಮತ್ತೆ ಲಾಕ್‍ಡೌನ್ ಆದ ಪರಿಣಾಮ ಮುಂದೂಡಲಾಗಿದ್ದು, ಇನ್ನೂ ರಿಲೀಸ್ ದಿನಾಂಕವನ್ನು ಚಿತ್ರತಂಡ ಬಹಿರಂಗಪಡಿಸಿಲ್ಲ.
ಒಟ್ಟಿನಲ್ಲಿ ಯುವರಚಿತ್ನ ಸಿನಿಮಾ ಬಿಡುಗಡೆ ಕುರಿತು ಭಾರೀ ಕುತೂಹಲ ಮೂಡಿದ್ದು, ಅಭಿಮಾನಿಗಳು ಬಿಡುಗಡೆ ದಿನಾಂಕದ ಘೋಷಣೆಗಾಗಿ ಕಾತರದಿಂದ ಕಾಯುತ್ತಿದ್ದಾರೆ.