Breaking News

ಮತ್ತೊಮ್ಮೆ ನಿರೀಕ್ಷೆ ಹುಸಿಯಾಗಿಸಿದ ಸರ್ಕಾರ; ವಿಶೇಷ ಪ್ಯಾಕೇಜ್ ಘೋಷಿಸದ ಸಿಎಂ

Spread the love

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಜಾರಿಗೆ ತಂದಿರುವ ಕಠಿಣ ಕ್ರಮಗಳಿಂದಾಗಿ ರಾಜ್ಯದಲ್ಲಿ ಹಲವರು ಸಂಕಷ್ಟಕ್ಕೀಡಾಗಿದ್ದು, ಬಡವರಿಗಾಗಿ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ನಿರೀಕ್ಷೆಯನ್ನು ಸರ್ಕಾರ ಮತ್ತೊಮ್ಮೆ ಹುಸಿಯಾಗಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ವಿಶೇಷ ಪ್ಯಾಕೇಜ್ ಬಗ್ಗೆ ಪರೋಕ್ಷವಾಗಿ ನಿರಾಕರಿಸಿದ್ದಾರೆ. ಯಾವುದೇ ಆರ್ಥಿಕ ಪ್ಯಾಕೇಜ್ ಪ್ರಸ್ತಾಪಿಸದ ಸಿಎಂ, ಕೊರೊನಾ ಹೆಚ್ಚಾಗುತ್ತಿರುವುದರಿಂದ ಸೋಂಕಿತರ ಜೀವ ಉಳಿಸುವುದು ಸರ್ಕಾರದ ಮೊದಲ ಆದ್ಯತೆ ಎಂದಿದ್ದಾರೆ.

ಕಠಿಣ ಕ್ರಮ ಜಾರಿ ಮಾಡಿರುವುದರಿಂದ ಜನರು ತೊಂದರೆಗೀಡಾಗಿದ್ದಾರೆ ನಿಜ. ಸಂಕಷ್ಟ ಅರಿತು ಇಂದಿರಾ ಕ್ಯಾಂಟೀನ್ ಗಳಲ್ಲಿ ಉಚಿತ ಊಟದ ವ್ಯವಸ್ಥೆ, ಬಿಪಿಎಲ್ ಕರ್ಡ್ ದಾರರಿಗೆ ತಲಾ 5 ಕೆಜಿ ಅಕ್ಕಿ ವಿತರಿಸಲಾಗುವುದು. ವಿಶೇಷ ಪ್ಯಾಕೇಜ್ ಬಗ್ಗೆ ಮುಂದಿನ ದಿನಗಳಲ್ಲಿ ಚಿಂತನೆ ನಡೆಸಲಾಗುವುದು ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ ಬದಲಾವಣೆ ನಿರ್ಧಾರ: ಡಿ.ಕೆ ಶಿವಕುಮಾರ್

Spread the loveಬೆಂಗಳೂರು: ರಾಜ್ಯದಲ್ಲಿ ಇರೋ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ  ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ