Breaking News
Home / ರಾಜ್ಯ / ಭಾರತದಲ್ಲಿ ಕೊರೊನಾವೈರಸ್ ಲಸಿಕೆ ಅಭಾವಕ್ಕೆ ಇಲ್ಲಿದೆ ಸಾಕ್ಷ್ಯ

ಭಾರತದಲ್ಲಿ ಕೊರೊನಾವೈರಸ್ ಲಸಿಕೆ ಅಭಾವಕ್ಕೆ ಇಲ್ಲಿದೆ ಸಾಕ್ಷ್ಯ

Spread the love

ನವದೆಹಲಿ, ಮೇ 14: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ಅಭಾವ ಸೃಷ್ಟಿಯಾಗಿರುವುದು ಅಂಕಿ-ಅಂಶಗಳ ಸಹಿತ ಸಾಬೀತಾಗಿದೆ. ದಿನದಿಂದ ದಿನಕ್ಕೆ ಕೊವಿಡ್-19 ಲಸಿಕೆ ವಿತರಣೆ ಪ್ರಮಾಣ ಇಳಿಮುಖ ಆಗುತ್ತಿರುವುದು ಪರಿಸ್ಥಿತಿಗೆ ಹಿಡಿದ ಕೈಗನ್ನಡಿಯಾಗಿದೆ.

ಒಂದು ದಿನದಲ್ಲಿ 30 ಲಕ್ಷಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡುತ್ತಿದ್ದ ಸಂಖ್ಯೆ ಇದೀಗ ಅರ್ಧಕ್ಕರ್ಧ ತಗ್ಗಿದೆ. ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 118 ದಿನಗಳಲ್ಲಿ 17,91,77,029 ಜನರಿಗೆ ಲಸಿಕೆ ನೀಡಲಾಗಿದೆ.

ಗುರುವಾರ ರಾತ್ರಿ 8 ಗಂಟೆ ವೇಳೆಗೆ 19,75,176 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ 10,10,856 ಜನರಿಗೆ ಮೊದಲ ಡೋಸ್ ಹಾಗೂ 9,64,320 ಎರಡನೇ ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಎಷ್ಟು ಹಂತಗಳಲ್ಲಿ ಲಸಿಕೆ ವಿತರಣೆ?:

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗಕ್ಕೆ ಕಡಿವಾಣ ಹಾಕಲು ಮೂರು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರು, ಎರಡನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಹಾಗೂ ಮೂರನೇ ಹಂತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ.

ಕೊರೊನಾ ಲಸಿಕೆ ವಿತರಣೆ ಪ್ರಮಾಣ:

ಕಳೆದ ಮೇ 1ರಿಂದ ಈವರೆಗೂ 18 ವರ್ಷ ಮೇಲ್ಪಟ್ಟ 44 ವರ್ಷದೊಳಗಿನ 39,14,688 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ಭಾರತದಲ್ಲಿ ಈವರೆಗೂ 96,16,697 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 66,02,553 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,43,14,563 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 81,12,476 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 5,65,82,401 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 85,14,552 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 5,42,32,598 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 1,72,86,501 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪ್ರದೇಶ ಮಹಾರಾಷ್ಟ್ರಕ್ಕೆ: ಅಂಜಲಿ ಹೇಳಿಕೆಗೆ ಸ್ಪಷ್ಟನೆ ನೀಡಲು BJP ಆಗ್ರಹ

Spread the love ಬೆಂಗಳೂರು: ‘ಬೆಳಗಾವಿ ಜಿಲ್ಲೆಯ ಕೆಲವು ತಾಲ್ಲೂಕುಗಳು ಮಹಾರಾಷ್ಟ್ರಕ್ಕೆ ಸೇರಬೇಕಾಗಿವೆ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ