Breaking News

ಪ್ರಧಾನಿ ಮೋದಿ ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ ಮಾಡುತ್ತಿದ್ದಾರೆ : ಸಿದ್ದರಾಮಯ್ಯ ಲೇವಡಿ

Spread the love

ಬೆಂಗಳೂರು : ಕೊರೊನಾ ಸೋಂಕಿನ ವಿರುದ್ಧ ಕೇಂದ್ರ ಸರ್ಕಾರದ ಹೋರಾಟ ವಿಫಲವಾಗಿದೆ ಎಂದು ಆರೋಪಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿ ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

ಶುಕ್ರವಾರ ಕೆಪಿಸಿಸಿ ಕಛೇರಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರ ಮತ್ತು ರಾಜ್ಯ ಸರ್ಕಾರ ವ್ಯಾಕ್ಸಿನ್ ಕೊಡುವುದರಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ಕೇಂದ್ರಕ್ಕೆ ಛೀಮಾರಿ ಹಾಕಿದರೂ ರಾಜ್ಯಕ್ಕೆ ವ್ಯಾಕ್ಸಿನ್ ನೀಡಿಲ್ಲ. ಇಂತಹ ಬೇಜವಬ್ದಾರಿ ಸರ್ಕಾರವನ್ನು ನಾನು ನೋಡುತ್ತಿರುವುದು ಇದೇ ಮೊದಲು ಎಂದು ಕಿಡಿಕಾರಿದರು.ಕಳೆದ ಜನವರಿಯಲ್ಲಿಯೇ ಭಾರತಕ್ಕೆ ಕಾಲಿಟ್ಟಿದೆ. ಮೊದಲ ಅಲೆಯಿಂದಲೇ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳಿಗೆ ಸಾಕಷ್ಡು ಅನುಭವವಾಗಿದೆ‌. ಎರಡನೇ ಅಲೆ ಪ್ರಖರತೆ ಬಗ್ಗ ತಜ್ಞರ ಸಲಹೆ ಬಗ್ಗೆ ಮಾಹಿತಿ ಇತ್ತು. ಆದರೆ ಗ ಕೋವಿಡ್ ಲಸಿಕೆ ನೀಡುವಲ್ಲಿ ಸರ್ಕಾರ ವಿಫಲವಾಗಿದೆ. ಸರ್ಕಾರದ ಬಳಿ ವ್ಯಾಕ್ಸಿನ್ ಇಲ್ಲ. . 1ಕೋಟಿ ವ್ಯಾಕ್ಸಿನ್ ಗೆ ಸುಮಾರು 300ಕೋಟಿ ರೂ.ಹಣ ಬೇಕು. ಸರ್ಕಾರ ಯಾವುದೇ ರೀತಿಯ ತಯಾರಿಯಲ್ಲಿ‌ ಇರಲಿಲ್ಲ‌. ಹೀಗಾಗಿ ವ್ಯಾಕ್ಸಿನ್ ಕೂಡ ಸಿಗುತ್ತಿಲ್ಲ.. ಸರ್ಕಾರ ಜನರ ರಕ್ಷಣೆ ಮಾಡುವಲ್ಲಿ ವಿಫಲವಾಗಿದೆ ಎಂದು ಸಿದ್ದರಾಮಯ್ಯ ಟೀಕಿಸಿದರು.


Spread the love

About Laxminews 24x7

Check Also

ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು

Spread the love ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ