Breaking News

ಕಾಲ್ ಸೆಂಟರ್ ನ ಮೂಲಕ ಆಸ್ಪತ್ರೆಗಳ ರಿಯಾಲಿಟಿ ಚೆಕ್- ಸಚಿವ ಅರವಿಂದ ಲಿಂಬಾವಳಿ

Spread the love

ಬೆಂಗಳೂರು :ಆಸ್ಪತ್ರೆಗಳ ವಾಸ್ತವ ಸ್ಥಿತಿಗತಿಗಳನ್ನು ತಿಳಿಯಲು ಕಾಲ್ ಸೆಂಟರ್ ಗಳ ಮೂಲಕ ಆಸ್ಪತ್ರೆಗಳ ರಿಯಾಲಿಟಿ ಚೆಕ್ ಕೂಡ ಮಾಡಲಾಗುತ್ತದೆ. ಇದರಿಂದ ಆಸ್ಪತ್ರೆಗಳಲ್ಲಿ ಬಿಡುಗಡೆಯಾಗುತ್ತಿರುವ ರೋಗಿಗಳು ಮತ್ತು ದಾಖಲಾಗುತ್ತಿರುವ ರೋಗಿಗಳ ನಿಖರ ಮಾಹಿತಿ, ಬೆಡ್ ಗಳ ಲಭ್ಯತೆ ಬಗ್ಗೆ ವಾಸ್ತವ ವರದಿಗಳು ದೊರಕಲು ಸಾಧ್ಯವಾಗುತ್ತದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ ರೂಂ, ಕಾಲ್ ಸೆಂಟರ್ ನಿರ್ವಹಣೆ ಮತ್ತು ಸೋಂಕಿತರಿಗೆ ವೈದ್ಯಕೀಯ ಸಲಹೆ ವ್ಯವಸ್ಥೆಯ ಮೇಲ್ವಿಚಾರಣೆಯ ನೋಡಲ್ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

ಅವರು ಇಂದು ಬೆಂಗಳೂರಿನ ಯಶವಂತಪುರದಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕಿತರಿಗೆ ನೆರವು ನೀಡಲು ಸ್ಥಾಪಿಸಿರುವ 1912 ಸಹಾಯವಾಣಿಯ ಹೆಚ್ಚುವರಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು.

ಈ ಹಿಂದೆ 1912 ಸಹಾಯವಾಣಿಯಲ್ಲಿ 60 ಮಾರ್ಗಗಳಿದ್ದವು, ಈಗ ಅದಕ್ಕೆ ಹೆಚ್ಚುವರಿಯಾಗಿ 70 ಮಾರ್ಗಗಳನ್ನು ( ಸೀಟರ್) ಸೇರಿಸಲಾಗಿದೆ. ಈವರೆಗೂ ಈ ಸಹಾಯವಾಣಿಗೆ ಕರೆ ಮಾಡಿದಾಗ 12 ರಿಂದ 20 ನಿಮಿಷಗಳ ಕಾಯುವಿಕೆ ಇರುತ್ತಿತ್ತು, ಆದರೆ ಈ ಹೆಚ್ಚುವರಿ ಕರೆ ಮಾರ್ಗಗಳನ್ನು ಸ್ಥಾಪಿಸಿರುವುದರಿಂದ ಈಗ ಕರೆ ಮಾಡಿದ ಕೂಡಲೇ ಸೇವೆ ಲಭ್ಯವಾಗಲಿದೆ ಎಂದು ಅವರು ತಿಳಿಸಿದರು.

ಈ ಕಾಲ್ ಸೆಂಟರ್ ನಲ್ಲಿ ವೈದ್ಯರು ಸಹ ಉಪಸ್ಥಿತರಿದ್ದು, ವಲಯಗಳಿಗೆ ಕರೆ ವರ್ಗಾವಣೆ ವಿಳಂಬವಾದಲ್ಲಿ ಅವರೇ ಸ್ವತಹ ಮಾತನಾಡಿ ಅಗತ್ಯ ವೈದ್ಯಕೀಯ ಸಲಹೆ ಸೂಚನೆಗಳನ್ನು ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು. ಈ ಕಾಲ್ ಸೆಂಟರ್ ಆಸ್ಪತ್ರೆಗಳ ರಿಯಾಲಿಟಿ ಚೆಕ್ ಜೊತೆಗೆ ಟ್ರಯೇಜಿಂಗ್ ಕೇಂದ್ರವಾಗಿಯೂ ಕಾರ್ಯನಿರ್ವಹಿಸುತ್ತದೆ ಎಂದು ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.

ಈ ಕೇಂದ್ರವನ್ನು ಸ್ಥಾಪಿಸುವ ಮೂಲಕ ಎಲ್ಲಾ ವಲಯಗಳನ್ನು ಒಳಗೊಂಡಂತೆ 9 ವಾರ್ ರೂಮ್ ಮತ್ತು ಒಂದು ಕೇಂದ್ರ ವಾರ್ ರೂಮ್ ಮೇಲಿನ ಒತ್ತಡ ಕಡಿಮೆ ಮಾಡಲಾಗಿದೆ. ಜೊತೆಗೆ ಇದರಿಂದ ವಾರ್ ರೂಮ್ ಮತ್ತು ಕಾಲ್ ಸೆಂಟರ್ ಗಳ ಕಾರ್ಯನಿರ್ವಹಣೆ ಹೆಚ್ಚು ಪರಿಣಾಮಕಾರಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ಶಾಸಕ ಮುನಿರತ್ನ, ಬಿ ಬಿ ಎಂ ಪಿ ಯ ಮುಖ್ಯ ಆಯುಕ್ತ ಗೌರವ್ ಗುಪ್ತ, ವಿಶೇಷ ಆಯುಕ್ತ ರಂದೀಪ್, ಸಹಾಯವಾಣಿ ನೋಡಲ್ ಅಧಿಕಾರಿ ವಿಪಿನ್ ಸಿಂಗ್ ಸೇರಿದಂತೆ ಉನ್ನತ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ