Breaking News

ಬ್ಲ್ಯಾಕ್‌ ಫಂಗಸ್‌ ಹಾವಳಿ ಉಲ್ಬಣ; 52 ಮಂದಿ ಬಲಿ

Spread the love

ಮುಂಬೈ: ಒಂದೆಡೆ ಮಹಾಮಾರಿ ಕೋವಿಡ್‌ ಸಾಂಕ್ರಾಮಿಕ ಅಟ್ಟಹಾಸ ತೀವ್ರವಾಗುತ್ತಿದೆ ಇನ್ನೊಂದೆಡೆ, ಬ್ಲ್ಯಾಕ್‌ ಫಂಗಸ್‌ ಹಾವಳಿ ಉಲ್ಬಣಗೊಳ್ಳುತ್ತಿದೆ. ಮಹಾರಾಷ್ಟ್ರದಲ್ಲಿ ಹೊಸ ರೋಗದ 52 ಮಂದಿ ಬಲಿಯಾಗಿದ್ದಾರೆ.

ಹೆಚ್ಚು ಕಾಲ ಆಸ್ಪತ್ರೆಗಳಲ್ಲಿ ಉಳಿಯುವ ಕೋವಿಡ್‌ ಸೋಂಕಿತರು ಹಾಗೂ ಸೋಂಕಿನಿಂದ ಗುಣಮುಖರಾಗಿ ಮಲೀನ ಪರಿಸರದಲ್ಲಿ ವಾಸ ಮಾಡುವ ದುರ್ಬಲ ಕಾಯರಿಗೆ ಫಂಗಸ್‌ ರೋಗ ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ ಎಂದು ಹೇಳಲಾಗಿದ್ದು, ಮಹಾರಾಷ್ಟ್ರದಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಅದರೊಂದಿಗೆ ಈ ರೋಗದಿಂದ 52 ಮಂದಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಕೊರೋನಾ ಸೋಂಕಿನಿಂದ ಚೇತರಿಸಿಕೊಂಡವರಲ್ಲಿ ಇದು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ರೋಗಿಗಳಲ್ಲಿ ಅತೀವ್ರ ಜ್ವರ, ಕಣ್ಣಿನ ನೋವು, ಮೂಗು ಕಟ್ಟುವುದು, ಕಣ್ಣಿನ ದೃಷ್ಠಿ ಭಾಗಶಃ ನಷ್ಟಗೊಂಡಿರುವ ಲಕ್ಷಣಗಳು ಕಂಡುಬಂದಿವೆ.

ಪ್ರಸ್ತುತ ಸಾವನ್ನಪ್ಪಿರುವ ಈ 52 ಮಂದಿಯೂ ಕೊರೋನಾ ಸೋಂಕಿಗೊಳಗಾಗಿ ಚೇತರಿಸಿಕೊಂಡವರೇ ಆಗಿದ್ದರೆಂದು ಆಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ನಡುವೆ ಇದೇ ಮೊದಲ ಬಾರಿಗೆ ಮಹಾರಾಷ್ಟ್ರ ಆರೋಗ್ಯ ಸಚಿವಾರ ಬ್ಲ್ಯಾಕ್ ಫಂಗಸ್ ನಿಂದ ಸಾವನ್ನಪ್ಪಿದ್ದವರ ಕುರಿತಂತೆಯು ಪ್ರತ್ಯೇಕವಾಗಿ ಮಾಹಿತಿ ನೀಡಲು ಆರಂಭಿಸಿದೆ.


Spread the love

About Laxminews 24x7

Check Also

ಬೆಳಗಾವಿಗೆ ಆಗಮಿಸಲಿದ್ದಾರೆ ನಿಸರ್ಗಮನೆ ಖ್ಯಾತಿಯ ಡಾ.ವೆಂಕಟರಮಣ ಹೆಗಡೆ

Spread the loveಬೆಳಗಾವಿ: ಶಿರಸಿ ವೇದ ವೆಲ್‌ನೆಸ್ ಸೆಂಟರ್ ಹಾಗೂ ನಿಸರ್ಗಮನೆ ಖ್ಯಾತ ವೈದ್ಯರಾದ ಡಾ. ವೆಂಕಟರಮಣ ಹೆಗಡೆ ಅವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ