Breaking News

ಕೊರೋನಾ ನಿಯಮ ಉಲ್ಲಂಘನೆ; 448 ವಾಹನ ಜಪ್ತಿ, 3.26 ಕೋಟಿ ರೂ. ದಂಡ ಸಂಗ್ರಹ

Spread the love

ಬೆಂಗಳೂರು: ಕೊರೊನಾ ತಡೆಗಟ್ಟುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದರೂ ಅನೇಕ ಮಂದಿ ನಿಯಮಗಳನ್ನು ಉಲ್ಲಂಘಿಸಿ ಎಲ್ಲೆಡೆ ಸಂಚರಿಸುತ್ತಿದ್ದಾರೆ. ನಿಯಮ ಮೀರಿ ರಸ್ತೆಗಳಿದಿದ್ದ ವಾಹನಗಳನ್ನು ನಗರ ಪೊಲೀಸರು ಗುರುವಾರ ಜಪ್ತಿ ಮಾಡಿದ್ದು, ಅಂತೆಯೇ 3.26 ಕೋಟಿ ರೂ. ದಂಡ ಸಂಗ್ರಹಣೆ ಮಾಡಿದ್ದಾರೆ.

ಕಳೆದ 20 ಗಂಟೆಗಳಲ್ಲಿ ಕಾರ್ಯಾಚರಣೆ ನಡೆಸಿ 448 ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅದರಲ್ಲಿ 429 ದ್ವಿಚಕ್ರ ವಾಹನ, 11 ತ್ರಿಚಕ್ರ ವಾಹನ, 8 ನಾಲ್ಕು ಚಕ್ರದ ವಾಹನ ಸೇರಿ ಒಟ್ಟು 448 ವಾಹನಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಅದರೊಂದಿಗೆ, ಇದೇ ವೇಳೆಯಲ್ಲಿ ಎನ್‌ಡಿಎಂಎ ಕಾಯ್ದೆಯಡಿ 12 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

3.26 ಕೋಟಿ ರೂ. ದಂಡ ಸಂಗ್ರಹ

ಕೊರೊನಾ ಎರಡನೇ ಅಲೆ ನಿಯಂತ್ರಿಸಲು ಜಾರಿಯಾಗಿರುವ ಲಾಕ್ ಡೌನ್ ನಿಯಮ ಉಲ್ಲಂಘಿಸಿದವರಿಂದ ನಗರ ಪೊಲೀಸರು ಭಾರೀ ದಂಡ ವಿಧಿಸುತ್ತಿದ್ದಾರೆ.


Spread the love

About Laxminews 24x7

Check Also

ರಾಜಕಾರಣಿಗಳು, ಸಹಚರರ ಜೊತೆ ಮಲಗು ಎಂದು ಪೀಡಿಸುವ ಗಂಡ! 6 ಬಾರಿ ತಲಾಖ್, ಅಬಾರ್ಷನ್

Spread the loveಬೆಂಗಳೂರು, ಜುಲೈ 1: ಗಂಡನಾದವನೇ ಹೆಂಡತಿಯನ್ನು ಬೇರೆಯವರ ಜತೆ ಮಲಗುವಂತೆ ಪೀಡಿಸಿದರೆ, ಅದಕ್ಕಾಗಿ ಹಿಂಸಿಸಿದರೆ ಮಹಿಳೆಯ ಸ್ಥಿತಿ ಹೇಗಾಗಬಹುದು! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ