Breaking News
Home / ರಾಜಕೀಯ / ರಾಜ್ಯದ ಜನತೆಗೆ ಆದಷ್ಟು ಬೇಗ ಲಸಿಕೆ ಕೊಡಿಸಲು ಯತ್ನ: ಸಿಎಂ

ರಾಜ್ಯದ ಜನತೆಗೆ ಆದಷ್ಟು ಬೇಗ ಲಸಿಕೆ ಕೊಡಿಸಲು ಯತ್ನ: ಸಿಎಂ

Spread the love

ಬೆಂಗಳೂರು : ರಾಜ್ಯದ ಜನತೆಗೆ ಆದಷ್ಟು ಬೇಗ ಲಸಿಕೆ ಕೊಡಿಸಲು ಸರಕಾರ ಸರ್ವ ಪ್ರಯತ್ನ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ.

ಬಸವ ಜಯಂತಿ ಅಂಗವಾಗಿ ಬಸವೇಶ್ವರ ವೃತ್ತದಲ್ಲಿರುವ ಬಸವಣ್ಣ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಮಾತನಾಡಿದ ಅವರು, ರಾಜ್ಯಕ್ಕೆ ಅಗತ್ಯವಿರುವ ಲಸಿಕೆ ಪಡೆಯಲು ಗ್ಲೋಬಲ್‌ ಟೆಂಡರ್‌ ಕರೆಯಲಾಗಿದೆ. ಲಸಿಕೆ, ಆಮ್ಲಜನಕ ಹಾಗೂ ಔಷಧ ನೀಡುವಲ್ಲಿ ಕೇಂದ್ರ ಸರಕಾರ ಯಾವುದೇ ತಾರತಮ್ಯ ಮಾಡುತ್ತಿಲ್ಲ. ಈಗ ಎಲ್ಲರೂ ಒಟ್ಟಾಗಿ ಹೋರಾಟ ಮಾಡಬೇಕಿದೆ. ಈ ಸಂದರ್ಭದಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ ಎಂದು ಹೇಳಿದರು.

ಬೇಲಿ ಮಠದ ಶ್ರೀ ಶಿವರುದ್ರ ಸ್ವಾಮೀಜಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ