Breaking News
Home / Uncategorized / ಕೊರೊನಾ ಹೆಚ್ಚಳ: ಕೇರಳದಲ್ಲಿ ಮೇ 23ರವರೆಗೆ ಲಾಕ್‌ಡೌನ್ ವಿಸ್ತರಣೆ

ಕೊರೊನಾ ಹೆಚ್ಚಳ: ಕೇರಳದಲ್ಲಿ ಮೇ 23ರವರೆಗೆ ಲಾಕ್‌ಡೌನ್ ವಿಸ್ತರಣೆ

Spread the love

ತಿರುವನಂತಪುರಂ, ಮೇ 14: ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳದಲ್ಲಿ ಮೇ 23ರವರೆಗೆ ಲಾಕ್‌ಡೌನ್ ವಿಸ್ತರಿಸಲಾಗಿದೆ.

ಈ ಕುರಿತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಘೋಷಿಸಿದ್ದಾರೆ. ಕೇರಳದಲ್ಲಿ ಕಳೆದ ಕೆಲವು ವಾರಗಳಿಂದ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳ ಕಂಡುಬಂದಿದೆ. ಗುರುವಾರ ಅಲ್ಲಿ 39,955 ಹೊಸ ಪ್ರಕರಣಗಳು ದಾಖಲಾಗಿದ್ದು, 97 ಮಂದಿ ಮೃತಪಟ್ಟಿದ್ದರು.

ಕೊರೊನಾ ಬಿಕ್ಕಟ್ಟು ಉಲ್ಬಣಿಸಿದ್ದು, ರಾಜ್ಯದ ಆಸ್ಪತ್ರೆಗಳಲ್ಲಿ ಹಾಸಿಗೆ, ಆಮ್ಲಜನಕ ಕೊರತೆ ಎದುರಾಗಿರುವುದಾಗಿ ಇತ್ತೀಚೆಗಷ್ಟೇ ವರದಿಯಾಗಿತ್ತು.ಈ ಹಿಂದೆ ಮೇ 8 ರಿಂದ ಮೇ 16ರವರೆಗೆ ಲಾಕ್‌ಡೌನ್ ಘೋಷಿಸಲಾಗಿತ್ತು ಅದನ್ನು 23ರವರೆಗೆ ವಿಸ್ತರಿಸಲಾಗಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,43,144 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 4,000 ಮಂದಿ ಕೊವಿಡ್-19 ಸೋಂಕಿತರು ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದು, 3,44,776 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಶುಕ್ರವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಒಟ್ಟು2,40,46,809 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,00,79,599 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ ಈವರೆಗೂ 2,62,317 ಜನರು ಬಲಿಯಾಗಿದ್ದಾರೆ. ಇದರ ಹೊರತಾಗಿ 37,04,893 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.


Spread the love

About Laxminews 24x7

Check Also

ಶೂ ವ್ಯಾಪಾರಿ ನಿವಾಸದಲ್ಲಿ ಬರೋಬ್ಬರಿ 40 ಕೋಟಿ ರೂ. ನಗದು ವಶಕ್ಕೆ IT RAID

Spread the love ಉತ್ತರ ಪ್ರದೇಶದ ಆಗ್ರಾದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿದ ದಾಳಿಯ ಫಲವಾಗಿ 40 ಕೋಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ